ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನ ಜುಲೈ 5ನೇ ತಾರೀಖಿನವರೆಗೂ ನೀಡಬಾರದು ಎಂದು ಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.

0

ಬೆಂಗಳೂರು : 2020-21ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನ ಜುಲೈ 5ನೇ ತಾರೀಖಿನವರೆಗೂ ನೀಡಬಾರದು ಎಂದು ಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.

ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೂ ತಡೆಯಾಜ್ಞೆ ಜಾರಿಯಲ್ಲಿರಲಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

ಇನ್ನು ಸರ್ಕಾರ ಕೋರ್ಟ್ ಮುಂದೆ 12 ತಜ್ಞರ ಸಮಿತಿ ರಚಿಸಿರುವುದಾಗಿ ಹೇಳಿಕೆ ನೀಡಿದ್ದು.. 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ, 76 ಸಾವಿರ ರಿಪೀಟರ್ಸ್ ಫಲಿತಾಂಶದ ಬಗ್ಗೆ ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ ಎಂದು ಹೇಳಿದೆ. ಅಲ್ಲದೇ 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಜಂಟಿ ನಿರ್ದೇಶಕ ಕೃಷ್ಣಪ್ಪ ಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

 

ರಿಪೀಟರ್ಸ್ ಹಾಗೂ ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಬೇಡ. ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯ ಎಂದು ಈ ವೇಳೆ ನ್ಯಾ.ಬಿ.ವಿ. ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ಪಟ್ಟಿದೆ. ಇನ್ನು ವಿಚಾರಣೆಯನ್ನ ಜುಲೈ 5ಕ್ಕೆ ಮುಂದೂಡಲಾಗಿದೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');