ಸದ್ಯಕ್ಕೆ ಪ್ರವಾಹದ ಭೀತಿ ಇಲ್ಲ: ಡಿಸಿ ಹಿರೇಮಠ

0

ಬೆಳಗಾವಿ:   ಕೃಷ್ಣಾ ಜಲಾಶಯದಿಂದ  ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭೇಟಿ ನೀಡಿ,  ನದಿಗಳ ನೀರಿನ ಮಟ್ಟ ವೀಕ್ಷಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಎಚ್‌.ವಿ. ದರ್ಶನ್‌, ಎಸ್ಪಿ ಲಕ್ಷ್ಮಣ ನಿಂಬರಗಿ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಬಳಿಯ ಸೇತುವೆ ಹಾಗೂ ಕಲ್ಲೋಳ ಬಳಿಗೆ ಭಾನುವಾರ ಭೇಟಿ ನೀಡಿ ಕೃಷ್ಣಾ ನದಿಯ ಹರಿವಿನ ಬಗ್ಗೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ  ಕಡಿಮೆಯಾದರೂ, ಅಲ್ಲಿಂದ ಕೃಷ್ಣಾ ಮತ್ತು ಉಪ ನದಿಗಳಿಗೆ ಬಂದು ಸೇರುವ ನೀರಿನ ಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಆ ರಾಜ್ಯದ ರಾಜಾಪುರ ಬ್ಯಾರೇಜ್‌ನಿಂದ ಹಾಗೂ ದೂಧ್‌ಗಂಗಾ ನದಿಯಿಂದ ಒಟ್ಟು 1,19,718 ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ.

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಮಳೆ ತಗ್ಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲೂ ಮಳೆ ಪ್ರಮಾಣ ಇಳಿಕೆಯಾಗಿದೆ. ಹೀಗಾಗಿ, ಸದ್ಯಕ್ಕೆ ಪ್ರವಾಹದ ಪರಿಸ್ಥಿತಿ ಇಲ್ಲ. ಆದಾಗ್ಯ ತುರ್ತು ಸ್ಥಿತಿ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');