ಅಂತರರಾಜ್ಯ ಬಸ್ ಗಳ ಸಂಚಾರ ಆರಂಭ

0

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ  ಹಿನ್ನೆಲೆಯಲ್ಲಿ ನಾಳೆಯಿಂದ ಅಂತರರಾಜ್ಯ ಬಸ್ ಸಂಚಾರ ಆರಂಭವಾಗಲಿದ್ದು, ಸರ್ಕಾರ ಅನುಮತಿ ನೀಡಿದೆ.

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಬಸ್‌ ಓಡಾಟ ಶುರುವಾಗಲಿದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆಯಿಂದ  ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50 ಆಸನ ಸಾಮರ್ಥ್ಯದೊಂದಿಗೆ ಸಾರಿಗೆ ಕಾರ್ಯಚರಣೆ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅದರಂತೆ ಕೋವಿಡ್ ಮಾರ್ಗಸೂಚಿ ಅನ್ವಯ ಬಸ್ ಗಳು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಚಾರ ನಡೆಸಲಿವೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');