ಸರ್ಕಾರ ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಸಡಿಲಿಕೆ

0

ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಕಾರಣದಿಂದ ರಾಜ್ಯ ಸರ್ಕಾರ ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿದೆ.

ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮವನ್ನು ಸಡಿಲಿಕೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ಮಳಿಗೆಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ. ಆದರೆ ಹವಾನಿಯಂತ್ರಕ (ಎಸಿ) ಇರುವ ಅಂಗಡಿಗಳು, ಶಾಪಿಂಗ್ ಮಾಲ್ ಗಳನ್ನು ತೆರೆಯಲು ಅನುಮತಿ ಅವಕಾಶವಿಲ್ಲ.

ರಾಜ್ಯ ಸರ್ಕಾರ ಸೋಮವಾರ ಉಡುಪಿ, ಶಿವಮೊಗ್ಗ ಸೇರಿದಂತೆ ಆರು ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಿ ಆದೇಶಿಸಿತ್ತು. ಈ ಜಿಲ್ಲೆಗಳಲ್ಲಿ ಸಂಜೆ ಐದು ಗಂಟೆಯವರೆಗೆ ಎಲ್ಲ ರೀತಿಯ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿತ್ತು.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');