ಚಿಕ್ಕೋಡಿ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿಪ ಸದಸ್ಯ ಮಹಾಂತೇಶ ಕವಟಗಿಮಠ ಆಕ್ರೋಶ

0

ಚಿಕ್ಕೋಡಿ: ಪಟ್ಟಣದಲ್ಲಿ ಆರೋಗ್ಯ ಇಲಾಖೆಯಿಂದ 20 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ತಾಯಿ-ಮಗು ಆಸ್ಪತ್ರೆಯನ್ನು ಕಾಲಮಿತಿಯಲ್ಲಿ ನಿರ್ಮಾಣ ಮಾಡದೇ ಇರುವುದಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ತರಾಟೆಗೆ ತೆಗೆದುಕೊಂಡರು.

ಪಟ್ಟಣದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ತಾಯಿ ಮತ್ತು ಮಗು ಆಸ್ಪತ್ರೆಗೆ ಮಂಗಳವಾರ ಅಧಿಕಾರಿಗಳೊಂದಿಗೆ ಬೇಟಿ ನೀಡಿ ಕಾಮಗಾರಿ ಪರಿಶೀಲನೆ ಮಾಡಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ಈ ಆಸ್ಪತ್ರೆಯ ಕಟ್ಟಡ ಕಾಮಗಾರಿ 2017ರಲ್ಲಿ ಮಂಜೂರಾತಿ ದೊರೆತು 2018 ರಲ್ಲಿ ಕಾಮಗಾರಿ ಆರಂಭಗೊಂಡು ಕಾಲಮಿತಿಯಲ್ಲಿ ಮುಕ್ತಾಯಗೊಂಡು ಸಾರ್ವಜನಿಕರ ಸೇವೆಗೆ ಲಭ್ಯವಾಗಬೇಕಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅವಧಿ ಮುಗಿದು ಮತ್ತೇ ಎರಡು ವರ್ಷ ವಿಳಂಬವಾಗಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಗುತ್ತಿಗೆದಾರನ ವಿರುದ್ಧ ಕ್ರಮ ಜರುಗಿಸದೇ ಸುಮ್ಮನಿರುವುದು ವಿಷಾದನೀಯ ಸಂಗತಿ ಎಂದರು.

ಈ ಆಸ್ಪತ್ರೆಯ ಜತೆಗೆ ನಿಪ್ಪಾಣಿ, ಸವದತ್ತಿ ಸೇರಿದಂತೆ ಆರು ಕಡೆಗೆ ತಾಯಿ-ಮಗು ಆಸ್ಪತ್ರೆ ಮಂಜೂರಾಗಿದ್ದವು. ಈಗಾಗಲೇ ನಿಪ್ಪಾಣಿಯ ತಾಯಿ ಮತ್ತು ಮಗು ಆಸ್ಪತ್ರೆ ಕಾಮಗಾರಿ ಪೂರ್ಣಗೊಂಡು ಲೋಪಾರ್ಣೆಗೊಂಡು ಆರು ತಿಂಗಳಾಗಿದೆ. ಆದರೇ ಇನ್ನೂ ಚಿಕ್ಕೋಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ತಾಯಿ-ಮಗು ಆಸ್ಪತ್ರೆ ಕಾಮಗಾರಿ ಪೂರ್ಣಗೊಳ್ಳದಿರುವುದು ಖೇದಕರ ಎಂದು ಹೇಳಿದರು.

ಕೂಡಲೇ, ಗುತ್ತಿಗೆದಾರ ಜಗದೀಶ ಹೊಸಮನಿಯವರನ್ನು ಕರೆದು ಅವರಿಗೆ ಕೊನೆಯ ನೋಟಿಸು ಕೊಡಬೇಕು. ಕಾಮಗಾರಿಯನ್ನು ಪ್ರಾರಂಭಿಸಿ ಮೂರು ತಿಂಗಳಲ್ಲಿ ಮುಗಿಸುವಂತೆ ಖಡಕ್ ಸೂಚನೆ ನೀಡಬೇಕು. ಇಲ್ಲವಾದಲ್ಲಿ ಅವರನ್ನು ತೆಗೆದು ಹಾಕಿ ಇಲಾಖೆಯಿಂದ ಉಳಿದ ಕಾಮಗಾರಿ ಪೂರ್ಣ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೋಟಿಸು ಕೊಟ್ಟರು ಬಾರದಿದ್ದಲ್ಲಿ ಅವರನ್ನು ಬ್ಲ್ಯಾಕ್ ಲಿಸ್ಟ್‍ಗೆ ಸೇರಿಸುವಂತೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಆಸ್ಪತ್ರೆಯ ರಸ್ತೆಯ ಬಗ್ಗೆ ಸ್ವಲ್ಪ ಸಮಸ್ಯೆ ಇದ್ದು, ಕೂಡಲೇ ಅದನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ತಹಶೀಲ್ದಾರ ಪ್ರವೀಣ ಜೈನ್, ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಎಡಿಎಚ್‍ಓ ಡಾ. ಎಸ್.ಎಸ್.ಗಡೇದ, ಟಿಎಚ್‍ಓ ಡಾ.ವಿ.ವಿ. ಶಿಂಧೆ, ಕಾರ್ಯನಿರ್ವಾಹಕ ಅಭಿಯಂತರ ಎಂ.ಜಿ. ಜತ್ತ, ನಾಜನೀನ ಶೇಖ, ಬಿ.ಎ.ಕುಂಬಾರ ಮುಂತಾದವರು ಉಪಸ್ಥಿತರಿದ್ದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');