ಸದ್ಯಕ್ಕೆ ಆರಂಭವಾಗಲ್ಲ ಶಾಲೆಗಳು : ಸಿಎಂ ಯಡಿಯೂರಪ್ಪ

0

ಬೆಂಗಳೂರು : ಮೂರನೇ ಕೊರೊನಾ ಅಲೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಂಗಳವಾರ ಡಾ.ದೇವಿಶೆಟ್ಟಿ ನೇತೃತ್ವದ ತಂಡ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ಬೆನ್ನೆಲೆ ಸಿಎಂ ಹಿರಿಯ ಸಚಿವರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು.

ಡಿಸಿಎಂ ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಕೆ.ಸುಧಾಕರ್ ಜೊತೆ ಸಮಾಲೋಚನೆ ಮಾಡಿದರು.

ಬಳಿಕ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿ, ಡಾ.ದೇವಿಪ್ರಸಾದ್ ಶೆಟ್ಟಿ ಅವರ ಮಧ್ಯಂತರ ವರದಿ ಸಲ್ಲಿಕೆಯಾಗಿದೆ. ಮೂರ‌ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಮಾಣದ ಸೋಂಕು ತಗುಲಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ ಎಂದರು.

ಮೂರನೇ ಅಲೆ ತಡೆಗಟ್ಟಲು ಆರ್ಥಿಕ ಸಂಪನ್ಮೂಲ, ಮಾನವ ಸಂಪನ್ಮೂಲ ಬೇಕು. ಸಾರ್ವಜನಿಕರ ಸಹಭಾಗಿತ್ವ ಬೇಕು ಎಂದಿದೆ. ಕೋವಿಡ್-19ಗೆ ತುತ್ತಾದ ಮಕ್ಕಳ ಮನೋಸ್ಥೈರ್ಯ ಹೆಚ್ಚಿಸಲು ಶಿಫಾರಸ್ಸು ಮಾಡಿದೆ ಎಂದು ತಿಳಿಸಿದರು.

ಸದ್ಯಕ್ಕೆ ಆರಂಭವಾಗಲ್ಲ ಶಾಲೆಗಳು‌ :

ರಾಜ್ಯದಲ್ಲಿ ಸದ್ಯಕ್ಕೆ ಶಾಲೆಗಳು‌ ಆರಂಭವಾಗುವುದಿಲ್ಲ ಎಂಬ ಬಗ್ಗೆ ಸಿಎಂ ಸುಳಿವು ಕೊಟ್ಟರು. ಕೇವಲ ಕಾಲೇಜು ಮಕ್ಕಳಿಗೆ ಮಾತ್ರ  ತರಗತಿಗೆ ಹಾಜರಾಗುವ ಅವಕಾಶ ನೀಡಲು ಚಿಂತನೆ ಮಾಡಲಾಗಿದೆ. ಲಸಿಕೆ ಕೊಟ್ಟ ಬಳಿಕ ಕಾಲೇಜು ಆರಂಭಿಸಲು ತಜ್ಞರು ಸಲಹೆ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಲಸಿಕೆ ಕೊಟ್ಟ ಬಳಿಕವೇ ಕಾಲೇಜು ತೆರೆಯಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');