ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಭೆ ಹೋಬಳಿ ಮಟ್ಟದಲ್ಲಿ ಟಿಸಿ ದುರಸ್ತಿ ಕೇಂದ್ರಗಳ ಸ್ಥಾಪನೆಗೆ ತಕ್ಷಣ ಲೈಸೆನ್ಸ್ ನೀಡಲು ಸೂಚನೆ

0

ಚಿಕ್ಕೋಡಿ: ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಭೆ
ಹೋಬಳಿ ಮಟ್ಟದಲ್ಲಿ ಟಿಸಿ ದುರಸ್ತಿ ಕೇಂದ್ರಗಳ ಸ್ಥಾಪನೆಗೆ ತಕ್ಷಣ ಲೈಸೆನ್ಸ್ ನೀಡಲು ಸೂಚನೆ


ಬೆಳಗಾವಿ, ಜೂ.23: ಚಿಕ್ಕೋಡಿ (ಬೆಳಗಾವಿ): ಪ್ರವಾಹ ಸಂದರ್ಭದಲ್ಲಿ ಹಾಗೂ ನಂತರದ ದಿನಗಳಲ್ಲಿ ವಿದ್ಯುತ್ ವ್ಯತ್ಯಯದಿಂದ ತೀವ್ರ ತೊಂದರೆ ಉಂಟಾಗುವುದರಿಂದ ತುರ್ತು ದುರಸ್ತಿಗೆ ಅನುಕೂಲವಾಗುವಂತೆ ಪ್ರತಿ ಹೋಬಳಿ ಮಟ್ಟದಲ್ಲಿ ಟಿ.ಸಿ. ದುರಸ್ತಿ ಕೇಂದ್ರಗಳನ್ನು ಆರಂಭಿಸಲು ತಕ್ಷಣವೇ ಲೈಸೆನ್ಸ್ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂಗಾರು ಮಳೆಯಿಂದ ತೊಂದರೆಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಬುಧವಾರ (ಜೂ.23) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಹೋಬಳಿ ಮಟ್ಟದಲ್ಲಿ ಟಿ.ಸಿ. ದುರಸ್ತಿ ಕೇಂದ್ರಗಳನ್ನು ಆರಂಭಿಸಲು ತಕ್ಷಣವೇ ಲೈಸೆನ್ಸ್ ನೀಡಬೇಕು.
ಅಗತ್ಯ ಟಿಸಿ ಮತ್ತು ಕಂಡಕ್ಟರ್ ಗಳನ್ನು ಚಿಕ್ಕೋಡಿ ಉಪ ವಿಭಾಗಕ್ಕೆ ಪೂರೈಸಬೇಕು ಎಂದು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸಭೆಯಲ್ಲಿಯೇ ದೂರವಾಣಿ ಮೂಲಕ ನಿರ್ದೇಶನ ನೀಡಿದರು.
ನದಿತೀರದ ಪ್ರದೇಶಗಳನ್ನು ಹೊಂದಿರುವ ಚಿಕ್ಕೋಡಿ ಉಪ ವಿಭಾಗದಲ್ಲಿ ಖಾಲಿ ಇರುವ ಹೆಸ್ಕಾಂ ಅಧಿಕಾರಿ ಹುದ್ದೆಗಳಿಗೆ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಹಿರಿಯ ಅಧಿಕಾರಿಗಳಿಗೆ ತಿಳಿಸಿದರು.
ಪ್ರವಾಹ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯದಿಂದ ಕುಡಿಯುವ ನೀರು ಪೂರೈಕೆ, ನೀರಾವರಿ ಸೇರಿದಂತೆ ಅನೇಕ ಸಮಸ್ಯೆಗಳು ಉದ್ಭವಿಸಲಿವೆ. ಆದ್ದರಿಂದ ಈ ಎಲ್ಲ ಅಂಶಗಳನ್ನು ಪರಿಗಣಿಸಿ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
33 ಕೆ.ವಿ. ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವ ಸಲ್ಲಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅತಿವೃಷ್ಟಿ ಹಾಗೂ ಪ್ರವಾಹದಿಂದ ವಿದ್ಯುತ್ ಕಂಬಗಳು ಬಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ತುರ್ತು ದುರಸ್ತಿಗೆ ಅಗತ್ಯವಿರುವ ವಿದ್ಯುತ್ ವಾಹಕಗಳು, ಪರಿವರ್ತಕಗಳು, ಕಂಬಗಳು ಮತ್ತು ವಿದ್ಯುತ್ ತಂತಿಯನ್ನು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನದಿತೀರದ ಗ್ರಾಮದಲ್ಲಿ ಲಸಿಕೆಗೆ ಆದ್ಯತೆ:
ಪ್ರವಾಹದಿಂದ ಬಾಧಿತಗೊಳ್ಳುವ ಗ್ರಾಮಗಳಲ್ಲಿ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.
ಇನ್ನೂ ಹೆಚ್ಚಿನ ಲಸಿಕೆ ಪೂರೈಕೆಗೆ ಸರಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಮನೆಹಾನಿಯ ಕುರಿತು ಅನೇಕ ಜನರು ಅಹವಾಲು ಸಲ್ಲಿಸುತ್ತಾರೆ. ಮುಕ್ತ ಮನಸ್ಸಿನಿಂದ ಪರಿಹಾರ ಬಿಡುಗಡೆಗೆ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಮಣ್ಣು ಹಾಗೂ ಮೇಲ್ ಮುದ್ದಿಗಳು ಈ ಭಾಗದಲ್ಲಿ ಪಕ್ಕಾ ಮನೆಗಳೇ ಆಗಿರುವುದರಿಂದ ಅವುಗಳನ್ನು ಪಕ್ಕಾ ಮನೆ ಎಂದೇ ಪರಿಗಣಿಸಿ ಪರಿಹಾರ ನೀಡಬೇಕು.
ಭಾಗಶಃ ಮನೆಹಾನಿಗಳನ್ನು ಸಮೀಕ್ಷೆ ಮಾಡುವಾಗ ಸ್ಥಳೀಯ ಜನರ ಸ್ಥಿತಿಗತಿ ಆಧರಿಸಿ ಉದಾರ ಮನೋಭಾವದಿಂದ ಪರಿಹಾರಕ್ಕೆ ಪರಿಗಣಿಸಬೇಕು.

ಹಂತ ಹಂತವಾಗಿ ನೀರು ಬಿಡುಗಡೆ ಮಹಾರಾಷ್ಟ್ರ ಸಮ್ಮತಿ:
ಜಲಾಶಯ ಸಂಪೂರ್ಣ ಭರ್ತಿಯಾದಾಗ ಒಮ್ಮೆಲೆ ನೀರು ಬಿಡುಗಡೆ ಮಾಡಿದರೆ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.
ಹಂತ ಹಂತವಾಗಿ ನೀರು ಬಿಡುಗಡೆಗೆ ಮಹಾರಾಷ್ಟ್ರ ಸರಕಾರ ಕೂಡ ಸಹಮತ ವ್ಯಕ್ತಪಡಿಸಿದೆ.
ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ನದಿತೀರದ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
ಪ್ರವಾಹ ಬಂದಾಗ ಸಂಪೂರ್ಣ ಜಲಾವೃತವಾಗುವ ಗ್ರಾಮಗಳ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಆದ್ಯತೆ ನೀಡಬೇಕು.
ಪ್ರವಾಹ ಸಂದರ್ಭದಲ್ಲಿ ತುರ್ತು ಸೇವೆಗೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ದೀರ್ಘ ರಜೆ ನೀಡಬಾರದು.
ತುರ್ತು ಸಂದರ್ಭದಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಔಷಧಿ ಮತ್ತಿತರ ಅಗತ್ಯ ಸಾಮಗ್ರಿಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.
ಚಿಕಿತ್ಸೆಗೆ ಆಗಮಿಸುವ ಜನರಿಗೆ ಔಷಧಿ ಚೀಟಿ ಬರೆದುಕೊಟ್ಟರೆ ಸಂಬಂಧಿಸಿದ ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು.

ಕೋವಿಡ್ ಪ್ರಯೋಗಾಲಯ ತಕ್ಷಣ ಆರಂಭಿಸಲು ಸೂಚನೆ:
ಚಿಕ್ಕೋಡಿಯಲ್ಲಿ ಕೋವಿಡ್ ಪರೀಕ್ಷಾ ಪ್ರಯೋಗಾಲಯವು ಮೂರ್ನಾಲ್ಕು ದಿನಗಳಲ್ಲಿ ಸ್ಥಾಪಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ಗೋವಿಂದ ಕಾರಜೋಳ ನಿರ್ದೇಶನ ನೀಡಿದರು..
ಕೆಲವೆಡೆ ಶಾಲಾ ಕಟ್ಟಡಗಳು ಶಿಥಿಲಗೊಂಡಿರುವುದರಿಂದ ಉತ್ತಮ ಸ್ಥಿತಿಯಲ್ಲಿ ಇರುವ ಶಾಲಾ ಕಟ್ಟಡಗಳಲ್ಲಿ ಮಾತ್ರವೇ ಕಾಳಜಿ ಕೇಂದ್ರ ಆರಂಭಿಸಬೇಕು ಎಂದು ಜವಳಿ ಮತ್ತು ಕೈಮಗ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಶ್ರೀಮಂತ ಪಾಟೀಲ ಅಧಿಕಾರಿಗಳಿಗೆ ತಿಳಿಸಿದರು.
ಪ್ರವಾಹದಿಂದ ಬಾಧಿತಗೊಳ್ಳುವ ಗ್ರಾಮಗಳಲ್ಲಿ ಆದ್ಯತೆ ಮೇರೆಗೆ ಕೋವಿಡ್ ನಿರೋಧಕ ಲಸಿಕೆ ನೀಡಬೇಕು ಎಂದು ಶಾಸಕ ಗಣೇಶ್ ಹುಕ್ಕೇರಿ ಸಚಿವರಿಗೆ ಒತ್ತಾಯಿಸಿದರು.
ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ತಕ್ಷಣವೇ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ನೆರೆಯ ರಾಜ್ಯದ ಜಲಾಶಯಗಳಿಂದ ನೀರು ಬಿಡುಗಡೆ ಮತ್ತು ಮಳೆಯ ಪ್ರಮಾಣ ಕುರಿತು ನಿಖರ ಮಾಹಿತಿ ವಿನಿಮಯಕ್ಕೆ ಅನುಕೂಲವಾಗುವಂತೆ ನಮ್ಮ ರಾಜ್ಯದ ಅಧಿಕಾರಿಗಳನ್ನು ನಿಯೋಜಿಸಲು ಕೂಡ ಕ್ರಮ ಕೈಗೊಳ್ಳಬೇಕಿದೆ ಎಂದು ಶಾಸಕ ಮಹೇಶ್ ಕುಮಠಳ್ಳಿ ಅವರು ಸಚಿವರ ಗಮನಸೆಳೆದರು.

ಪ್ರವಾಹ ಮುನ್ನೆಚ್ಚರಿಕೆ ಅಗತ್ಯ- ಕವಟಗಿಮಠ:
ಪ್ರತಿವರ್ಷ ಪ್ರವಾಹ ಬರುವುದು ಸಹಜ ಸ್ಥಿತಿಯಾಗುತ್ತಿದೆ. ಈ ಬಾರಿ ಆರಂಭದಲ್ಲಿಯೇ ಜಾಸ್ತಿ ಮಳೆಯಾಗಿರುವುದರಿಂದ ಬಹಳಷ್ಟು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.
ನೆರೆಯ ರಾಜ್ಯದ ಅಧಿಕಾರಿಗಳ ಜತೆ ಸಮನ್ವಯದಿಂದ ಪ್ರವಾಹ ಸ್ಥಿತಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ನದಿತೀರದ ಗ್ರಾಮಗಳಲ್ಲಿ ಕೆಲವು ಕಡೆ ಹೆಚ್ಚಿನ ಜನಸಂಖ್ಯೆ ಇರುವುದರಿಂದ ತುರ್ತು ಸಂದರ್ಭದಲ್ಲಿ ತಕ್ಷಣವೇ ಸ್ಥಳಾಂತರಕ್ಕೆ ಅನುಕೂಲವಾಗುವಂತೆ ಆಯಾ ಗ್ರಾಮದಲ್ಲಿ ಬೋಟ್ ಸಜ್ಜಾಗಿಟ್ಟಿರಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಪ್ರವಾಹ ಸಂದರ್ಭದಲ್ಲಿ ಜನರನ್ನು ಸ್ಥಳಾಂತರಿಸಿ ತಾತ್ಕಾಲಿಕ ವಸತಿ ಕಲ್ಪಿಸಲು ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶಗಳಿದ್ದು, ಈ ಬಗ್ಗೆ ಪರಿಶೀಲಿಸಬೇಕು ಎಂದು ಮಹಾಂತೇಶ ಕವಟಗಿಮಠ ತಿಳಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ನದಿ ತೀರದ ಗ್ರಾಮಗಳ ಶಾಶ್ವತ ಸ್ಥಳಾಂತರಕ್ಕೆ ಈಗಾಗಲೇ ಗುರುತಿಸಲಾಗಿರುವ ಸ್ಥಳದಲ್ಲಿ ತುರ್ತು ಸಂದರ್ಭದಲ್ಲಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.
ನೆರೆ ರಾಜ್ಯದ ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಈ ಬಾರಿ ಕೂಡ ಸಮಸ್ಯೆ ಉದ್ಭವಿಸದಂತೆ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಈಗಾಗಲೇ ಕಾಳಜಿ ಕೇಂದ್ರಕ್ಕಾಗಿ ಗುರುತಿಸಲಾಗಿರುವ ಯಾವುದಾದರೂ ಶಾಲಾ ಕಟ್ಟಡಗಳು ಶಿಥಿಲಗೊಂಡಿದ್ದರೆ ಅವುಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಚಿಕ್ಕೋಡಿ ಉಪ ವಿಭಾಗದಲ್ಲಿ ಇದುವರೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್, ಜೂನ್ ಮಾಹೆಯಲ್ಲಿ ಒಟ್ಟಾರೆ ವಾಡಿಕೆ ಮಳೆಗಿಂತ ಶೇ.94 ರಷ್ಟು ಅಧಿಕ ಮಳೆಯಾಗಿರುತ್ತದೆ.
ಸದ್ಯಕ್ಕೆ ಕೇವಲ 67 ಕ್ಯುಸೆಕ್ ನೀರಿನ ಹರಿವು ಇದೆ. ಎರಡೂವರೆ ಲಕ್ಷ ಕ್ಯೂಸೆಕ್ ನೀರಿನ ಹರಿವು ಇದ್ದರೆ ಮಾತ್ರ ಪ್ರವಾಹ ಸ್ಥಿತಿ ಉದ್ಭವಿಸುತ್ತದೆ ಎಂದು ವಿವರಿಸಿದರು.
ಎಲ್ಲ ತಾಲ್ಲೂಕುಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್. ತಂಡಗಳು ನಿಯೋಜಿಸಲಾಗಿದೆ.
ನುರಿತ ಈಜುಗಾರರನ್ನು ಗುರುತಿಸಲಾಗಿದ್ದು, ಅಗತ್ಯತೆ ಆಧರಿಸಿ ಅವರ ಸೇವೆಯನ್ನು ಪಡೆದುಕೊಳ್ಳಲಾಗುವುದು.
ಇತ್ತೀಚೆಗೆ ಸುರಿದ ಮಳೆಯಲ್ಲಿ 43 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಯುಕೇಶ್ ಕುಮಾರ್ ತಿಳಿಸಿದರು.
ಚಿಕ್ಕೋಡಿ ಉಪ ವಿಭಾಗದಲ್ಲಿ 168 ಕಾಳಜಿ ಕೇಂದ್ರಗಳನ್ನು ಸಿದ್ಧಪಡಿಸಲಾಗಿಟ್ಟುಕೊಳ್ಳಲಾಗಿದೆ ಎಂದು ಯುಕೇಶ್ ಕುಮಾರ್ ಹೇಳಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.////

ಉಚಿತ ಟ್ಯಾಬ್ಲೆಟ್ ವಿತರಣಾ ಕಾರ್ಯಕ್ರಮ
ಕೋವಿಡ್ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಆನ್ ಲೈನ್ ಕ್ಲಾಸ್ ಮೂಲಕ ಹೆಚ್ಚಿನ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು: ಸಚಿವ ಗೋವಿಂದ ಕಾರಜೋಳ


ಬೆಳಗಾವಿ, ಜೂ.23 : ವಿದ್ಯಾರ್ಥಿಗಳ ಆನ್ ಲೈನ್ ಕ್ಲಾಸ್ ಅನುಕೂಲಕ್ಕಾಗಿ ಟ್ಯಾಬ್ಲೆಟ್ ವಿತರಣೆ ಮಾಡಲಾಗುತ್ತಿದೆ. ಮಕ್ಕಳು ಟ್ಯಾಬ್ ಬಳಕೆಯ ಮೂಲಕ ಹೆಚ್ಚಿನ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಗೃಹದಲ್ಲಿ ಬುಧವಾರ (ಜೂನ್.23) ಟ್ಯಾಬ್ಲೆಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಟ್ಯಾಬ್ಲೆಟ್ ವಿತರಣೆ ಬಳಿಕ ಮಾತನಾಡಿದ ಅವರು ಆನ್ಲೈನ್ ಕ್ಲಾಸ್ ಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೋರೊನ ಸಂಕಷ್ಟ ಕಾಲದಲ್ಲಿಯೂ ಟ್ಯಾಬ್ ವಿತರಣೆ ಮಾಡುವ ಸರ್ಕಾರದ ಯೋಜನೆ ಮಹತ್ವದಾಗಿದೆ.
ರಾಜ್ಯದಲ್ಲಿ 430 ಕಾಲೇಜು ಹಾಗೂ ಜಿಲ್ಲೆಯಲ್ಲಿ 22 ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಒಟ್ಟು 6020 ವಿದ್ಯಾರ್ಥಿಗಳಿಗೆ ಸುಮಾರು 14 ಸಾವಿರ ಆಂದಾಜು ಮೊತ್ತದ ಟ್ಯಾಬ್ ವಿತರಿಸಲಾಗುತ್ತಿದೆ
ಕೋವಿಡ್ ಇರುವ ಕಾರಣ ಮಕ್ಕಳು ಮನೆಯಲ್ಲಿ ಆನ್ಲೈನ್ ಕ್ಲಾಸ್ ಸದುಪಯೋಗ ಪಡಿಸಿಕೊಳ್ಳಬೇಕು.
ಈ ಸಂದರ್ಭದಲ್ಲಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದ್ದು, ಟ್ಯಾಬ್ ಬಳಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು ಎಂದು ವಿಧ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಳೆದ ವರ್ಷ ಲ್ಯಾಪ್ ಟ್ಯಾಪ್ ವಿತರಣೆ ಮಾಡಲಾಗಿತ್ತು ಆದರೆ ಈ ವರ್ಷ ಮತ್ತೆ ಕೋವಿಡ್ ಸಂಕಷ್ಟ ಎದುರಾಗಿದ್ದು, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಟ್ಯಾಬ್ ವಿತರಣೆ ಮಾಡಲಾಗುತ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದರು.
ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿಗಳಾದ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್. ವಿ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲರಾದ ಪೆÇ್ರ. ಸಿ. ಈಶ್ವರಚಂದ್ರ ಸ್ವಾಗತಿಸಿದರು, ಪೆÇ್ರ. ಮಂಜುನಾಥ ಪೂಜೇರಿ ನಿರೂಪಿಸಿ ವಂದಿಸಿದರು.///

ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬೆಳಗಾವಿ, ಜೂ.23 : 2021-22ನೇ ಸಾಲಿಗೆ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಾದ ಬೆಳಗಾವಿ-1 (ಕಾಕತಿವೇಸ) ಬೆಳಗಾವಿ-2 (ರಾಮತೀರ್ಥನಗರ), ಖಾನಾಪೂರ, ಹುಕ್ಕೇರಿ, ಯಮಕನಮರಡಿ, ಸಂಕೇಶ್ವರ, ಕುಡಚಿ, ರಾಮದುರ್ಗ, ಸವದತ್ತಿ, ಗೋಕಾಕ, ಚಿಕ್ಕೋಡಿ, ಮೂಡಲಗಿ, ಕಿತ್ತೂರ, ಸದಲಗಾ ಈ ಶಾಲೆಗಳಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯಗಳಾದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ರವರಿಗೆ ಶೇ.75 ಹಾಗೂ ಇತರೆ ಹಿಂದುಳಿದ ವರ್ಗಗದವರಿಗೆ ಶೇ.25 ರಷ್ಟು ಅನುಪಾತದಲ್ಲಿ) ಅವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಭವನ ಕೆ.ಎಸ್.ಸಿ.ಎ ಕ್ರಿಕೇಟ್ ಕ್ರೀಡಾಂಗಣ ಎದುರುಗಡೆ, ರಾಮತೀರ್ಥ ನಗರ ಬೆಳಗಾವಿ, ಇವರಿಗೆ ತಾಲ್ಲೂಕಾ ಮಾಹಿತಿ ಕೇಂದ್ರಗಳು ಮತ್ತು ಸಂಬಂಧಪಟ್ಟ ಶಾಲೆಗಳಿಗೆ ಭೇಟಿ ನೀಡಿ ದೂರವಾಣಿ ಸಂಖ್ಯೆ ; 0831-2950349, 8095878321, 9632012404, 9964494147 ಗೆ ಸಂಪರ್ಕಿಸಿ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಎಸ್,ಎಫ್,ಸಿ ಕ್ರೀಯಾ ಯೋಜನೆಯಡಿಯಲ್ಲಿ ಅಂಗವಿಕಲರಿಗೆ ತ್ರೀ ಚಕ್ರ ವಾಹನ ಮಂಜೂರು: ಅರ್ಜಿ ಆಹ್ವಾನ

ಬೆಳಗಾವಿ, ಜೂ.23 : ಚನ್ನಮ್ಮ ಕಿತ್ತೂರು ಪಟ್ಟಣ ಪಂಚಾಯತಿಯ ಸನ್ 2019-20ನೇ ಸಾಲಿನ ಎಸ್,ಎಫ್,ಸಿ ಕ್ರೀಯಾ ಯೋಜನೆಯಡಿ ಅಂಗವಿಕಲರಿಗೆ ಶೇ 5% ರ ಅನುದಾನದಲ್ಲಿ ತ್ರೀಚಕ್ರ ವಾಹನ ಕೊಡುವ ಕ್ರೀಯಾ ಯೋಜನೇ ಮಂಜೂರಾಗಿದ್ದು, ತ್ರೀ ಚಕ್ರ ವಾಹನ ಪಡೆಯುವ ಸಲುವಾಗಿ ಶೇಕಡಾ 75 % ಮೇಲ್ಪಟ್ಟು ವಿಕಲತೇ ಇರುವ ಅಂಗವಿಕಲರಿಗೆ ಜೂ.30 ರಂದು ಅರ್ಜಿ ಆಹ್ವಾನಿಸಲಾಗಿದೆ.
ವಿಕಲತೇ ಇರುವ ಆಸಕ್ತ ಅಂಗವಿಕಲರಿಗೆ ಸಂಜೆ 4 ಗಂಟೆಯೊಳಗೆ ಪಟ್ಟಣ ಪಂಚಾಯಿತಿಗೆ ಬಂದು ನಿಗಧಿತ ನಮೂನೆಯಲ್ಲಿ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬಹುದು.
ಫಲಾನುಭವಿಯ ಆಯ್ಕೆ ವಿಧಾನವು ಸ್ವೀಕೃತವಾದ ಮೊದಲಿನ ಹಾಗೂ ಹೊಸದಾಗಿ ಬಂದ ಎಲ್ಲ ಅರ್ಜಿಗಳ ಹೆಸರುಗಳನ್ನು ನಮೂದಿಸಿ ಲಾಟರಿ ಮೂಲಕ ಜೂ.30 ರಂದು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಿದ ಎಲ್ಲ ಅರ್ಜಿದಾರರು ಮುಂಜಾನೆ 11 ಗಂಟೆಗೆ ಪಟ್ಟಣ ಪಂಚಾಯಿತ ಕಾರ್ಯಾಲಯದಲ್ಲಿ ಹಾಜರಿರಬೇಕು.
ಆಧಾರ ಕಾರ್ಡ, ರೇಷನ್ ಕಾರ್ಡ, ಚುನಾವಣೆ ಗುರುತಿನ ಚೀಟಿ, ಅಂಗವಿಕಲತೆ ಬಗ್ಗೆ ತಾಲೂಕು ಆಸ್ಪತ್ರೆಯಿಂದ ಪಡೆದ ಅಂಗವಿಕಲ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ, ಡ್ರೈವಿಂಗ್ ಲೈಸನ್ಸ್, ಆದಾಯ ಪ್ರಮಾಣ ಪತ್ರ ಈ ದಾಖಲಾತಿಗಳೊಂದಿಗೆ ಹಾಜರರಿಬೇಕು.
ಫಲಾನುಭವಿಗಳ ಆಯ್ಕೆ ಮಾಡಲು ಸರಕಾರಿ ಆದೇಶ ಸಂ.ಮ,ಮ,ಇ-3 ಪಿ.ಎಚ್.ಪಿ 2014 ಬೆಂಗಳೂರು ಜುಲೈ 04 ರ ಷರತ್ತುಗಳ ಅನ್ವಯವಾಗುತ್ತದೆ ಎಂದು ಚನ್ನಮ್ಮ ಕಿತ್ತೂರು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');