2 ಕೋಟಿ 20 ಲಕ್ಷ ರೂಪಾಯಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಮಹೇಶ ಕುಮಠಳ್ಳಿ

0
ಅಥಣಿ: ತಾಲ್ಲೂಕಿನ ಮುರಗುಂಡಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಮಹೇಶ ಕುಮಠಳ್ಳಿ ಚಾಲನೆ ನೀಡಿದರು.ಅಥಣಿ ಮತಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ ಕ್ಷೇತ್ರದಲ್ಲಿ ಇರುವ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಯನ್ನು ಚಾಲನೆ ನೀಡುತ್ತಿದ್ದೇನೆ ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮತ್ತು ಅಥಣಿ ಶಾಸಕರಾದ ಮಹೇಶ ಕುಮಠಳ್ಳಿ ಹೇಳಿದರು.
ಮುರಗುಂಡಿ- ತಂಗಡಿ ರಸ್ತೆಗೆ ಸುಮಾರು 78 ಲಕ್ಷ ರುಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿ, ನಂದೇಶ್ವರ – ನಂದಗಾಂವ ವರೆಗೆ ಸುಮಾರು 65 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮ್ಮ ಮತ ಕ್ಷೇತ್ರದಲ್ಲಿ ನೆನೆಗುದ್ದಿಗೆ ಬಿದ್ದಿರುವ ಕಾಮಗಾರಿಗಳನ್ನು ಕೈಗೆತ್ತಿಕೋಳ್ಳುವುದರ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಗುರಿ ಹೊಂದಿದ್ದೇನೆ ಎಂದರು.
ಈ ವೇಳೆ ಮಾತನಾಡಿದ ಮುರಗುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ ಪಾಟೀಲ ಮಾತನಾಡಿ ಶಾಸಕ ಮಹೇಶ ಕುಮಠಳ್ಳಿ ಅವರು ಅಥಣಿ ತಾಲೂಕಿನ ಹಲವು ಗ್ರಾಮಗಳಲ್ಲಿ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಶ್ರಮಿಸುತ್ತಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ಅಗತ್ಯವಾದ ರಸ್ತೆ ಕಾಮಗಾರಿ,ಸಮುದಾಯ ಭವನಗಳ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ತರುವ ಮೂಲಕ ಕ್ಷೇತ್ರದ ಜನರ ಸೇವೆ ಮಾಡುತ್ತಿದ್ದು ಮುರಗುಂಡಿ ಗ್ರಾಮಸ್ಥರು ಅವರಿಗೆ ಋಣಿಯಾಗಿದ್ದೇವೆ ಎಂದರು.
ಈ ಸಂಧರ್ಭದಲ್ಲಿ ಗುತ್ತಿಗೆದಾರರಾದ ಶಿವಾನಂದ ಸಂಕ್ರಟ್ಟಿ, ಅರ್ಜುನ ನಾಯಿಕ, ಶಿವಪುತ್ರ ನಾಯಿಕ, ಮಲ್ಲಿಕಾರ್ಜುನ ಅಂದಾನಿ, ಡಾ. ಅನೀಲ ಸೌದಾಗರ, ಗ್ರಾಮ ಪಂಚಾಯತ ಅದ್ಯಕ್ಷ ಬಸವರಾಜ ಪಾಟೀಲ, ಸಿದ್ರಾಯ ಕಾಳೇಲಿ, ಚನ್ನಬಸು ಜಗದಾಳೆ, ಕುಮಾರ ಪಾಟೀಲ, ಸುನೀಲ ಪವಾರ, ಪಿಡಿಓ ಎಸ್. ಎಸ್.ಸನಾಳ, ಇನ್ನೂ ಹಲವರು ಉಪಸ್ಥಿತರಿದ್ದರು.
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');