ಎಂಟು ಸೈನಿಕರ ವಿರುದ್ಧ ದೂರು ದಾಖಲು

0

ಶ್ರೀನಗರ:ಸ್ಥಳೀಯಮೂವರು  ಅಮಾಯಕ ವ್ಯಕ್ತಿಗಳ ಮೇಲೆ ಯೋದರು ಹಲ್ಲೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಎಂಟು ಯೋದರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಜಿಲ್ಲೆಯ ರಂಬಾನ್‌ ಸಮೀಪದ ಗ್ರಾಮವೊಂದರಲ್ಲಿ  ಮೂವರು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡವರನ್ನು ಖಾರಿ ಗ್ರಾಮದಲ್ಲಿನ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ಈ ಬಗ್ಗೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಸರಪಂಚರೊಬ್ಬರ ದೂರಿನ ಅನ್ವಯ ರಾಷ್ಟ್ರೀಯ ರೈಫಲ್ಸ್‌ಗೆ ಸೇರಿದ ಎಂಟು ಮಂದಿ ಯೋಧರ ವಿರುದ್ಧ ಬನಿಹಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.

ಹಲ್ಲೆಗೊಳಗಾದ ಮೂವರು ಕುಎಇ ಮೇಯಿಸಲು ಅರಣ್ಯ ಪ್ರದೇಶಕ್ಕೆ ಹೋದಾಗ ಸೈನಿಕರು ಯಾವುದೇ ಕಾರಣವಿಲ್ಲದೇ ಈ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಬಳಿಯಿದ್ದ ಮೊಬೈಲ್‌ ಮತ್ತು ಸ್ವಲ್ಪ ಹಣವನ್ನು ಕಸಿದುಕೊಂಡಿದ್ದಾರೆ ಎಂದು  ದೂರು ದಾಖಲಾಗಿದೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');