ಹೋರಾಟದ ಮಧ್ಯೆ ತೈಲ ಬೆಲೆ ಏರಿಕೆ: ಪ್ರತೀ ಲೀಟರ್ ಪೆಟ್ರೋಲ್ ಗೆ 104.28 ರೂ.

0

ನವದೆಹಲಿ: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್‌ ದರ 31 ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು ಶನಿವಾರ ದೇಶದಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಏರಿಕೆ ಮಾಡಿವೆ. ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.45ಕ್ಕೆ ಏರಿಕೆಯಾಗಿದ್ದು, ಲೀಟರ್ ಡೀಸೆಲ್ ದರ 94.04 ರೂ ಗೆ ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 95.9ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.3 ರೂ ಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 104.28ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 96.22 ರೂ ಗೆ ಏರಿಕೆಯಾಗಿದೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');