ರಾಜ್ಯದ 10ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ.

0

ಬೆಂಗಳೂರು : ಸರ್ಕಾರ ಪರೀಕ್ಷೆ ನಡೆಸುವ ಬಗ್ಗೆ ಈವರೆಗೂ ನಿರ್ದೇಶನ ನೀಡಿಲ್ಲವಾದರೂ ರಾಜ್ಯದ 10ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ  ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ.

ಗುಲ್ಬರ್ಗಾ ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಜುಲೈ 15ರಿಂದ ಪರೀಕ್ಷೆ ಆರಂಭಿಸಲಾಗಿವುದು ಎಂದು ವಿವಿ ಪ್ರಕಟಿಸಿದೆ. ಜುಲೈ19ರಿಂದ ವಿಜಯನಗರ ಕೃಷ್ಣದೇವರಾಯ ವಿವಿಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆ, ಜುಲೈ 20 ರಿಂದ ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿವಿ ಪರೀಕ್ಷೆ, ಆಗಸ್ಟ್ 2ರಿಂದ ಕರ್ನಾಟಕ ವಿವಿ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ವಿಶ್ವವಿದ್ಯಾಲಯಗಳು ತಿಳಿಸಿವೆ.

ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ, ಸಹಾಯಕ ಸಿಬ್ಬಂದಿಗೆ ಲಸಿಕೆ ನೀಡುವುದಕ್ಕೆ ನಿರ್ಧಾರವಾಗಿದೆ ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಟ್ವೀಟ್ ಮಾಡಿದ್ದರು. ಆದರೆ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ವಿತರಣೆ ಪೂರ್ಣಗೊಳ್ಳುವ ಮುಂಚೆಯೇ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ.

ಕಾಲೇಜು ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಕೊವಿಡ್ ಲಸಿಕೆ ನೀಡಿದ ಬಳಿಕವಷ್ಟೇ ಕಾಲೇಜು ಆರಂಭವಾಗುತ್ತದೆ. ಜುಲೈ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ವ್ಯಾಕ್ಸಿನ್ ನೀಡಲಾಗುವುದು ಎಂದು ಡಿಸಿಎಂ ಹೇಳಿದ್ದರು.

ಇದರ ನಡುವೆಯೂ ಸರ್ಕಾರದ ಆದೇಶಕ್ಕೂ ಮೊದಲೇ ವಿಶ್ವ ವಿದ್ಯಾಲಯಗಳ ಪರೀಕ್ಷೆ ನಡೆಸಲು ಮುಂದಾಗಿದ್ದು, ಒಂದು ಕಡೆ ವಿವಿಗಳ ಹಾಗೂ ಇನ್ನೊಂದಡೆ ಸರ್ಕಾರದ ತೀರ್ಮಾನದಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');