ಬಳ್ಳಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

0

ಬಳ್ಳಾರಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿಯ ಇಂದಿರಾ ನಗರ ನಿವಾಸಿಯಾದ ಸುನಿತಾ ಸಿದ್ದಪ್ಪ(25) ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಾದ ನಾಲ್ಕು ವರ್ಷದ ಯಶವಂತ್ ಹಾಗೂ ಮೂರು ವರ್ಷದ ಸಾನ್ವಿ, ತಾಯಿ ಜೊತೆಯಲ್ಲಿ ಪ್ರಾಣ ಬಿಟ್ಟಿವೆ. ತಡರಾತ್ರಿ ಮನೆಯ ಮುಂಭಾಗದ ವಾಟರ್ ಟ್ಯಾಂಕಿನಲ್ಲಿ ಮಕ್ಕಳನ್ನು ಮುಳುಗಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಿಗೆ ಕೌಟುಂಬಿಕ ಕಲಹವೇ ಕಾರಣ ಎಂದು ಹೇಳಲಾಗಿದ್ದು, ಕಳೆದ ಹಲವು ದಿನಗಳಿಂದ ಪತಿ-ಪತ್ನಿ ಮಧ್ಯೆ ಆಗಾಗ ಜಗಳವಾಗುತಿತ್ತು. ಇದೇ ಕಾರಣಕ್ಕಾಗಿ ಸುನಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');