2021-22 ನೇ ಸಾಲಿನ ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟೀವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

0

2021-22 ನೇ ಸಾಲಿನ ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟೀವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಬೆಳಗಾವಿ, ಜೂ.29 : 6 ತಿಂಗಳ 180 ದಿನಗಳ ಅವಧಿಯ ರೆಗ್ಯೂಲರ್ (ಡಿ.ಸಿ.ಎಂ) ಡಿಪ್ಲೋಮಾ ಇನ್ ಕೋ-ಆಪರೇಟೀವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಬೆಳಗಾವಿಯ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಇವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಹಕಾರ ಸಂಘ-ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಮತ್ತು ಖಾಸಗಿ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
ಜುಲೈ. 01 ರಿಂದ ಡಿಪ್ಲೋಮಾ ಇನ್ ಕೋ-ಆಪರೇಟೀವ್ ಮ್ಯಾನೇಜ್ಮೆಂಟ್ ತರಬೇತಿಯು ಪ್ರಾರಂಭವಾಗಲಿದ್ದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಜಿಲ್ಲೆಯ ಸಹಕಾರ ಸಂಘ-ಸಂಸ್ಥೆಗಳಿಂದ ಮತ್ತು ಖಾಸಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಿಶೇಷ ಡಿಪ್ಲೋಮಾ ಇನ್ ಕೋ-ಆಪರೇಟೀವ್ ಮ್ಯಾನೇಜ್ಮೆಂಟ್ ತರಬೇತಿ ನೀಡಲಾಗುವುದು.
ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಶಿಷ್ಯವೇತನ ನೀಡಲಾಗುವುದು. ವಯೋಮಿತಿ 16 ರಿಂದ ಗರಿಷ್ಟ 30 ವರ್ಷಗಳು ಮೀರಿರಬಾರದು.
ಪುರುಷ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯವಿರುತ್ತದೆ. ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕಗಳನ್ನು ತರಬೇತಿ ಸಂಸ್ಥೆಯಿಂದ ಮತ್ತು ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರಿ ಯುನಿಯನ್‍ಗಳಿಂದ ಪಡೆಯಬಹುದು.
ಅರ್ಜಿ ಸಲ್ಲಿಸಲು ಜುಲೈ.9 ರಂದು ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ರಾಮತೀರ್ಥ ನಗರ ಬೆಳಗಾವಿ ದೂರವಾಣಿ ಸಂ. 0831-2950026, ಮೋ: 636047529, 884259545, 8050533207 ಗೆ ಸಂಪರ್ಕಿಸಿ ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರಾದ ಎನ್.ಎಂ.ಶಿವಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಕೋವಿಡ್ 19: ಗಡಿಭಾಗದ ಚೆಕ್ ಪೆÇೀಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ

 

ಬೆಳಗಾವಿ, ಜೂ.29 : ಬೆಳಗಾವಿ 29  ಕೋವಿಡ್ 19 ಮೂರನೇ ಅಲೆ ಬರಬಹುದೆಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾದ ಬೆಳಗಾವಿಯಲ್ಲಿ ಕೋವಿಡ್19ರ ಸೋಂಕು ತಡೆಗಟ್ಟುವ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಮಹಾರಾಷ್ಟ್ರದಿಂದ ಬೆಳಗಾವಿ ಜಿಲ್ಲೆಯ ಎಲ್ಲ ಗಡಿಗಳ ಮೂಲಕ ಆಗಮಿಸುವ ಜನರನ್ನು ಕೋವಿಡ್ ನಿವಾರಣೆ ದೃಷ್ಟಿಯಿಂದ ಪರೀಕ್ಷೆಗೆ ಒಳಪಡಿಸುವುದು ಅತ್ಯಂತ ಕಟ್ಟುನಿಟ್ಟಿನಿಂದ ಆಗಬೇಕಿದೆ.
ಈ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳು (ಆರೋಗ್ಯ ಕಂದಾಯ ಶಿಕ್ಷಣ ಪೆÇಲೀಸ್) ಕೋವಿಡ್ 19 ಕುರಿತಂತೆ ಜಾಗೃತಿಯನ್ನು ಮೂಡಿಸಬೇಕು.
ಜನರ ಆರೋಗ್ಯ ರಕ್ಷಣೆಯ ಜವಾಬ್ದಾರಿಯನ್ನು ನಿಭಾಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಎಲ್ಲಾ ಇಲಾಖೆಯ ಅಧಿಕಾರಿಗಳು ಗಡಿಭಾಗದ ಚೆಕ್ ಪೆÇೀಸ್ಟ್ ತಪಾಸಣೆಯನ್ನು ಬಿಗಿಗೊಳಿಸಿ ಕರ್ತವ್ಯ ನಿರ್ವಹಿಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚನೆಯನ್ನು ನೀಡಬೇಕು.
ಕರ್ತವ್ಯಲೋಪ ಮಾಡುವಂತಹ ಅಧಿಕಾರಿಗಳಿಗೆ ಶಿಸ್ತು ಕ್ರಮವನ್ನು ಜರುಗಿಸಬೇಕು ಎಂದು ಉಪಮುಖ್ಯಮಂತ್ರಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೇ ರೀತಿ ಕೋವಿಡ್ ನಿಯಂತ್ರಣಕ್ಕಾಗಿ ಪ್ರಾದೇಶಿಕ ಆಯುಕ್ತರು, ಉತ್ತರ ವಲಯದ ಐಜಿಪಿ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಿಗೆ ಕೂಡ ಉಪಮುಖ್ಯಮಂತ್ರಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೂಚನೆಯನ್ನು ನೀಡಿದ್ದಾರೆ.///

 

ಕುಶಲಕರ್ಮಿ ವಸತಿ ಕಾರ್ಯಾಗಾರ: ಅರ್ಜಿ ಆಹ್ವಾನ

 

ಬೆಳಗಾವಿ, ಜೂ.29 : ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತವು ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ 60 ಕುಶಲ ಕರ್ಮಿಗಳಿಗೆ ಉ+2 ಮಾದರಿಯ ವಸತಿ ಕಾರ್ಯಾಗಾರ ನಿರ್ಮಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಈ ವಿಳಾಸಕ್ಕೆ ಜು. 1 ರಿಂದ ಪಡೆದು, ತದನಂತರ ಭರ್ತಿ ಮಾಡಿ ಅವಶ್ಯ ದಾಖಲೆಗಳೊಂದಿಗೆ ಜು. 20 ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
ಕಡ್ಡಾಯವಾಗಿ ಚರ್ಮಗಾರಿಕೆಯಲ್ಲಿ ತೊಡಗಿಕೊಂಡಿರಬೇಕು, ವಸತಿ ರಹಿತರಾಗಿರಬೇಕು, ಅರ್ಜಿದಾರರ ಕುಟುಂಬದಲ್ಲಿ ಯಾರು ಸರ್ಕಾರಿ ನೌಕರಿಯಲ್ಲಿ ಇರಬಾರದು.
ಪರಿಶಿಷ್ಟ ಜಾತಿ, ಸಮಗಾರ, ಮಾದರಿ, ಡೊರ, ಮಚಗಾರ ಮತ್ತು ಮೊಚಿ ಉಪಜಾತಿಗೆ ಸೇರಿದವರಾಗಿರಬೇಕು, ಈ ಹಿಂದೆ ನಿಗಮದಿಂದ ಅಥವಾ ಸರ್ಕಾರದ ಬೇರೆ ಯಾವುದೇ ವಸತಿ ಯೋಜನೆಯಡಿ ಸೌಲಭ್ಯ ಪಡಿದಿರಬಾರದು.
ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ, ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ನಗರ ಪ್ರದೇಶದವರಿಗೆ 87,600/- ಮತ್ತು ಗ್ರಾಮೀಣ ಪ್ರದೇಶದಲ್ಲಿ 32,000/- ಗಳ ಮೀತಿಯಲ್ಲಿರಬೇಕು, ಅರ್ಜಿದಾರರ ಕನಿಷ್ಠ ವಯಸ್ಸು 18 ವರ್ಷ ಮೇಲ್ಪಟ್ಟು ಮತ್ತು 60 ವರ್ಷದ ಒಳಗಿರಬೇಕು.
ಮಂಜುರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜುರಾತಿಯನ್ನು ಯಾವುದೇ ಹಂತದಲ್ಲಿ ರದ್ದು ಪಡಿಸುವ ಅಧಿಕಾರ ನಿಗಮವು ಹೊಂದಿರುತ್ತದೆ ಎಂದು ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');