ಬಿಜೆಪಿಯ ಮೂವರು ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ; ಶಾಸಕ ರಮೇಶ ಜಾರಕಿಹೊಳಿ ದೆಹಲಿಯಲ್ಲಿ ಆರೋಪ

0

 

ಬಿಜೆಪಿಗೆ ನಾನು ರಾಜೀನಾಮೆ‌ ನೀಡುವ‌ ಪ್ರಶ್ನೆಯೇ ಇಲ್ಲ; ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ನನಗೆ ಅನ್ಯಾಯ ಆಗಿಲ್ಲ

 

 

ಹೊಸದಿಲ್ಲಿ  : ಶಾಸಕ ರಮೇಶ ಜಾರಕಿಹೊಳಿ ಮಂಗಳವಾರ ಮಧ್ಯಾಹ್ನ ಬೆಂಗಳೂರಿನಿಂದ ದಿಢೀರ್ ದೆಹಲಿಗೆ ತೆರಳಿದ್ದಾರೆ. ರಾಜ್ಯ ರಾಜಕಾರಣದಲ್ಲಿನ ಅನೇಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ದಿಢೀರ್‌ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ‌ ಸಲ್ಲಿಸುವುದಾಗಿ ಹೇಳಿದ್ದ ಅವರು, ಮಂಗಳವಾರ‌ ಬೆಳಿಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ನಂತರ ಅಲ್ಲಿಂದ ದಿಢೀರ್ ದೆಹಲಿಗೆ ತೆರಳಿದ್ದರು.

ಬಿಜೆಪಿಯ ಮೂವರು ಬೆನ್ನಿಗೆ ಚೂರಿ ಹಾಕಿದ್ದಾರೆ:

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಗೆ ನಾನು ರಾಜೀನಾಮೆ‌ ನೀಡುವ‌ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ನನಗೆ ಅನ್ಯಾಯ ಆಗಿಲ್ಲ. ಪಕ್ಷದಲ್ಲಿ ಇರುವ ಮೂವರು ನನ್ನ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸುವೆ” ಎಂದು ಅವರು ಹೆಸರು ಬಹಿರಂಗ ಪಡಿಸದೇ ಆರೋಪ ಮಾಡಿದರು.

‘ನಾನು ಯಾರನ್ನು ಭೇಟಿ ಆಗುವೆ ಅನ್ನೋದು ಒಂದು ಅಥವಾ ಎರಡು ಗಂಟೆಯಲ್ಲಿ ಗೊತ್ತಾಗಲಿದೆ. ನಾನು ಈ ಸಂಬಂಧ ವೀಡಿಯೊ ಬಿಡುಗಡೆ ಮಾಡುತ್ತೇನೆ’ ಎಂದು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.

‘ನಿನ್ನೆ ರಾತ್ರಿ 2 ಗಂಟೆಗೆ ನನಗೆ ದೆಹಲಿಯ ಒಬ್ಬರಿಂದ ಕರೆ‌ ಬಂದಿದೆ. ಅವರ ಆಹ್ವಾನದ ಮೇರೆಗೆ ಇಲ್ಲಿಗೆ ಬಂದಿದ್ದೇ‌ನೆ. ಅವರ ಭೇಟಿಯ ನಂತರ ಫೋಟೊ, ವಿಡಿಯೊವನ್ನು ನಾನೇ ಕೊಡುತ್ತೇನೆ’ ಎಂದು ಅವರು ಹೇಳಿದರು.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');