ನಾಯಕತ್ವ ಬದಲಾವಣೆ ಕೂಗಿನ ಬೆನ್ನಲ್ಲೆ ರಾಜ್ಯಪಾಲರ ಭೇಟಿಗೆ ಮುಂದಾದ ಮುಖ್ಯಮಂತ್ರಿ : ಭಾರೀ ಕುತೂಹಲ ಮೂಡಿಸಿದ ಸಿಎಂ ನಡೆ

0

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ರಾಜ್ಯಪಾಲರ ಭೇಟಿಗೆ ಸಮಯವಕಾಶ ಕೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗಿನ ಬೆನ್ನಲ್ಲೇ ಸಿಎಂ ರಾಜ್ಯಪಾಲರ ಭೇಟಿಗೆ ಮುಂದಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.

ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ. ಅದರಂತೆ ಇಂದು ಸಂಜೆ 5.30ಕ್ಕೆ ಯಡಿಯೂರಪ್ಪ ಅವರು ರಾಜ್ಯಪಾಲರನ್ನ ಭೇಟಿಯಾಗಲಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ, ನಾಯಕತ್ವದ ಬದಲಾವಣೆಯ ಕೂಗು ಎದ್ದಿದೆ ಎನ್ನಲಾಗುತ್ತಿದೆ.

ದಿಢೀರ್ ಬೆಳವಣಿಗೆಯಿಂದ ಬಿಜೆಪಿಯಲ್ಲಿ ಸರಿಯಿಲ್ಲ ಎಂದು ಬಹಿರಂಗವಾಗುತ್ತಿದೆ. ಇದರ ಮಧ್ಯೆದಲ್ಲಿಯೇ ರಾಜ್ಯ ಬಿಜೆಪಿ ಉಸ್ತುವಾರಿ ಸೇರಿದಂತೆ ಅನೇಕ ನಾಯಕರು ಮುಂದಿನ ಎರಡು ವರ್ಷವೂ ಬಿ.ಎಸ್.ಯಡಿಯೂರಪ್ಪ ಅವರೇ ಸಿಎಂ ಎಂದು ಹೇಳುತ್ತಿದ್ದಾರೆ. ಈ ಹೇಳಿಕೆ ಹೊರತಾಗಿಯೂ ಬೆಳವಣಿಗೆ ಹಲವು ಪ್ರಶ್ನೆಗಳಿಗೆ ಎಡೆಮಾಡಿದೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');