2021-22 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮಾ ಪಡೆಯಲು ರೈತರಲ್ಲಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಮನವಿ

0

ಬೆಳಗಾವಿ, ಜು.01: ಬೆಳಗಾವಿ ಜಿಲ್ಲೆಯಲ್ಲಿ 2021-22 ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ ಹಿರೇಮಠ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ ಉದ್ದೇಶ:
1) ಸ್ಥಳ ನಿರ್ಧಿಷ್ಟ ಪ್ರಕೃತಿ ವಿಕೋಪ, ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ ಹಾಗೂ ಕೀಟ/ ರೋಗ ಭಾದೆಗಳಿಂದ ಅಧಿಸೂಚಿತ ಬೆಳೆ ವಿಫಲವಾದ ಸಂದರ್ಭದಲ್ಲಿ ವಿಮಾ ರಕ್ಷಣೆ ಒದಗಿಸುವುದು.
2 ) ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇಕಡಾ 75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇಕಡಾ 25 ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ರೈತರಿಗೆ ನೀಡಲಾಗುವದು.
3 ) ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗೆ (14 ದಿನ) ಚಂಡಮಾರುತ, ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ನೀಡಲಾಗುತ್ತದೆ.
ರೈತರು ಸದರಿ ಬೆಳೆ ವಿಮೆ ಯೋಜನೆಯಲ್ಲಿ ಪಾಲ್ಗೊಂಡು ಅಧಿಸೂಚಿತ ಬೆಳೆಗಳಿಗೆ ವಿಮಾ ರಕ್ಷಣೆಯನ್ನು ಒದಗಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Revamped PMFBY ಮಾರ್ಗಸೂಚಿಯನ್ವಯ ಪ್ರಸಕ್ತ ಸಾಲಿನಿಂದ ಈ ಯೋಜನೆಯು(Voluntary) ಐಚ್ಛಿಕವಾಗಿದ್ದು, ಬೆಳೆ ಸಾಲ ಪಡೆದ ರೈತರಿಗೆ ಸದರಿ ಯೋಜನೆಯಿಂದ ಹೊರಗುಳಿಯುವ (Opting – Out) ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತದೆ.
ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿಯಲ್ಲಿ ಒಳಪಡಿಸಬಹುದಾಗಿ, ಆದರೆ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ, ಈ ಕುರಿತು ಸಂಬಂಧಿಸಿದ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ನಿಗದಿತ ನಮೂನೆಯಲ್ಲಿ Opt – Out  ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.
ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಪಾಲಗೊಳ್ಳಲು ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ “Opt – In”    ಮುಚ್ಚಳಿಕೆ ಪತ್ರವನ್ನು ಬ್ಯಾಂಕಿನ ವ್ಯವಸ್ಥಾಪಕರಿಗೆ ನೀಡಬೇಕು.
ರೈತರು ತಮ್ಮ ವ್ಯಾಪ್ತಿಯಲ್ಲಿನ ಬ್ಯಾಂಕ್, ಸಹಕಾರಿ ಸಂಘ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ  (Common Service Center) ವಿಮೆ ಕಂತನ್ನು ಪಾವತಿಸಿ ಬೆಳೆ ವಿಮೆ ನೋಂದಣಿ ಮಾಡುಬಹುದಾಗಿದೆ.
ಸಂಬಂಧಿಸಿದ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಮಾನ್ಯ ಸೇವಾ ಕೇಂದ್ರಗಳ (Common Service Center) ಹೆಚ್ಚಿನ ಮಾಹಿತಿಗಾಗಿ ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ಸಂಯೋಜಕರು ಇವರನ್ನು ದೂರವಾಣಿ ಸಂಖ್ಯೆ 9449976218 ಹಾಗೂ 9008593066 ಗೆ ಸಂಪರ್ಕಿಸಬಹುದಾಗಿದೆ.
ಪ್ರಸಕ್ತ ಹಂಗಾಮಿನಲ್ಲಿ ರೈತರು ಈ ಬೆಳೆ ವಿಮೆ ಯೋಜನೆಯಲ್ಲಿ ಪಾಲ್ಗೊಳ್ಳಲು ಹೆಸರು (ಮಳೆ ಆಶ್ರಿತ) ಬೆಳೆಗೆ ಜುಲೈ 15 ಹಾಗೂ ಉಳಿದ ಎಲ್ಲಾ ಅಧಿಸೂಚಿತ ಬೆಳೆಗಳಿಗೆ ಜುಲೈ 31 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ರೈತ ಬಾಂಧವರು ಸ್ಥಳೀಯ ಬ್ಯಾಂಕ್‍ಗಳು, ಸಹಕಾರ ಸಂಘಗಳು, ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಯ ಅಧಿಕಾರಿಗಳನ್ನು ಹಾಗೂ ವಿಮಾ ಸಂಸ್ಥೆಯ ಪ್ರತಿನಿಧಿಗಳನ್ನು 9964064451, 6363921268, 8105412415 ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ. ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');