ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ ಪುನೀತ್ ರಾಜ್ ಕುಮಾರ್ ಹೊಸ ಸಿನಿಮಾ ‘ದ್ವಿತ್ವ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್

0

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯೊಂದಿಗೆ ಮತ್ತೊಮ್ಮೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೈಜೋಡಿಸುತ್ತಿದ್ದಾರೆ.

ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯಡಿ ‘ದ್ವಿತ್ವ’ ಎಂಬ ಚಿತ್ರ ತಯಾರಾಗಲಿದ್ದು, ಕನ್ನಡದ ಕ್ರಿಯಾಶೀಲ ಚಲನಚಿತ್ರ ನಿರ್ದೇಶಕ, ಲೂಸಿಯಾ ಚಿತ್ರ ಖ್ಯಾತಿಯ ಪವನ್ ಕುಮಾರ್ ನಿರ್ದೇಶಿಸುತ್ತಿದ್ದಾರೆ.

ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಸಿನೆಮಾವಾಗಿದೆ ಎಂದು ನಿರ್ಮಾಣ ಸಂಸ್ಥೆ ತಿಳಿಸಿದೆ. ಸೆಪ್ಟೆಂಬರ್ ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.

ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ವಿಭಿನ್ನವಾಗಿ ರಚಿಸಲಾಗಿದ್ದು, ಪೋಸ್ಟರ್ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಕುತೂಹ ಹೆಚ್ಚಿಸಿದೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');