ಬಿಜೆಪಿಗೆ ಯಡಿಯೂರಪ್ಪ ಬಿಟ್ರೆ ಗತಿ ಇಲ್ಲ : ಪ್ರಿಯಾಂಕ್ ಖರ್ಗೆ ವ್ಯಂಗ್ಯ

0

ಕಲಬುರಗಿ  : ‘ ಸಿದ್ದರಾಮಯ್ಯ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹೇಳಿಕೆ ನೀಡಿದ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಕೈಗೊಳ್ಳಬೇಕೇ ಎಂಬುವುದನ್ನು ಕಾಂಗ್ರೆಸ್ ಪಕ್ಷ ಶಿಸ್ತು ಸಮಿತಿ ಪರಿಶೀಲಿಸುತ್ತಿದೆ’ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪ್ರತಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಪಕ್ಷವನ್ನು ಬಲಪಡಿಸುವತ್ತ ತಮ್ಮ ಪ್ರಯತ್ನಗಳನ್ನು ಮಾಡುವ ಬದಲು ಮುಂದಿನ ಮುಖ್ಯಮಂತ್ರಿಯ ಬಗ್ಗೆ ಮಾತನಾಡಿರುವುದು ಸರಿಯಲ್ಲ. ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಕಡೆಯಿಂದ ತಪ್ಪಾಗಿದೆ. ನಾಯಕರನ್ನು ಆಯ್ಕೆ ಮಾಡಲು ಪಕ್ಷವು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಅನುಸರಿಸುತ್ತದೆ ಮತ್ತು ವ್ಯಕ್ತಿಗಳ ಹೇಳಿಕೆಗಳ ಮೇಲೆ ಕಾರ್ಯನಿರ್ವಹಿಸುವುದಿಲ್ಲ ‘ ಎಂದು ಹೇಳಿದರು.

‘ಶಾಸಕರಾದವರು ಈ ರೀತಿ ಮಾತನಾಡಬಾರದು. ಈ ಮಾತು ಮುಂದಿನ ಬಾರಿ ಅಧಿಕಾರ ಹಿಡಿಯುವ ಪಕ್ಷದ ಗುರಿಗೆ ಹಿನ್ನಡೆಯಾಗುತ್ತದೆ. ಮಾತನಾಡುವವರು ಇದನ್ನು ಅರಿತುಕೊಂಡು ಮಾತನಾಡಬೇಕು. ಯಾರು ಅನಗತ್ಯವಾಗಿ, ಬಹಿರಂಗವಾಗಿ ಈ ವಿಚಾರ ಚರ್ಚೆ ಮಾಡದಂತೆ ಈಗಾಗಲೇ ನಮ್ಮ ಪಕ್ಷದಲ್ಲಿ ಸೂಚನೆ ಹೊರಡಿಸಲಾಗಿದೆ. ಆದರೂ ಕೂಡ ಈ ವಿಚಾರವಾಗಿ ಮಾತನಾಡಿದವರ ವಿರುದ್ಧ ಶಿಸ್ತು ಸಮಿತಿ ಅಗತ್ಯ ಕ್ರಮ ಕೈಗೊಳ್ಳುತ್ತದೆ ‘ ಎಂದು ಮಾಹಿತಿ ಹಂಚಿಕೊಂಡರು.

‘ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯಾಗಲು ಹಲವಾರು ನಾಯಕರು ಇದ್ದಾರೆ. ಆದರೆ ಪಕ್ಷವನ್ನು ಮುನ್ನಡೆಸಬಲ್ಲ ಯಡಿಯೂರಪ್ಪ ಹೊರತುಪಡಿಸಿ ಬಿಜೆಪಿಯಲ್ಲಿ ಯಾರೂ ಇರಲಿಲ್ಲ. ನಮ್ಮಲ್ಲಿ ಸಿಎಂ ಅರ್ಹತೆ ಇರುವವರು ಬಹಳ ಜನ ಇರುವುದರಿಂದ ಈ ಮಾತು ಕೇಳಿ ಬರುತ್ತಿದೆ. ಆದರೆ ಬಿಜೆಪಿಯವರಿಗೆ ಯಡಿಯೂರಪ್ಪ ಬಿಟ್ರೆ ಗತಿ ಇಲ್ಲ’ ಎಂದು ಕಿಡಿ ಕಾರಿದರು./////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');