ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

0

ಬೆಳಗಾವಿ:  ಕಾಗವಾಡ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಕಾಗವಾಡ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 4 ಅಂಗನವಾಡಿ ಕಾರ್ಯಕರ್ತೆ ಮತ್ತು
12 ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗೆ 2020ರ ಸೆಪ್ಟೆಂಬರ್ 3 ರಂದು  ಅರ್ಜಿ ಆಹ್ವಾನಿಸಲಾಗಿತ್ತು.

ಶಿವನೂರ, ಪಾರ್ಥನಹಳ್ಳಿ, ಮೋಳವಾಡ, ಬಳ್ಳಿಗೇರಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಾಗಿ ಹಾಗೂ ನಾಗನೂರ ಪಿ.ಎ, ಕಾತ್ರಾಳ, ಬಳ್ಳಿಗೇರಿ, ಬೇವನೂರ, ಕಾಗವಾಡ, ಕೃಷ್ಣಾಕಿತ್ತೂರ, ಶೇಡಬಾಳ, ವಿನಾಯಕವಾಡಿ, ಉಗಾರ ಖುರ್ದ, ಐನಾಪೂರ, ಚಂದ್ರಪ್ಪವಾಡಿ ಅಂಗನವಾಡಿ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಾಗವಾಡದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಜುಲೈ 01 ರಂದು ಪ್ರಕಟಿಸಲಾಗಿದೆ.

ಆಕ್ಷೇಪಣೆಗಳು ಇದ್ದಲ್ಲಿ ಜುಲೈ 15 ರಂದು ಸಾಯಂಕಾಲ 5:30 ಗಂಟೆಯ ಒಳಗಾಗಿ ಕಾಗವಾಡ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಯನ್ನು ಸಲ್ಲಿಸಬಹುದು ಎಂದು ಕಾಗವಾಡದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');