ದೇಶದಲ್ಲಿ ಸೋಂಕು ಮೃತ್ಯಕೇಕೆ: 4,111 ಜನರಿಗೆ ಪಾಟಿಸಿವ್, 738 ಬಲಿ

0

ನವದೆಹಲಿ: ದೇಶ್ಯಾದ್ಯಂತ  ಸೋಂಕಿನ ಅಲೆ ಇಳಿಕೆಯಾಗುತ್ತಿವಾಗಲೆ, ಮತ್ತೆ ಭೀತಿ ಹುಟ್ಟಿಸುತ್ತಿದ್ದು  4 ಗಂಟೆಗಳ ಅವಧಿಯಲ್ಲಿ 44,111 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದೆ. 738 ಮಂದಿ ಹೆಮ್ಮಾರಿ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ತಿಳಿಸಿದ್ದು,  ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,05,02,362ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,01,050ಕ್ಕೆ ಏರಿಕೆಯಾಗಿದೆ.

ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 4,95,533ಕ್ಕೆ ಕುಸಿದಿದ್ದು, 97 ದಿನಗಳ ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ ಸಕ್ರಿಯ ಸೋಂಕಿತರ ಸಂಖ್ಯೆ ಇದಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 57,477 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,96,05,779ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 18,76,036 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 41,64,16,463 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ  34,46,11,291 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');