30 ಜಿಲ್ಲೆಗಳಲ್ಲಿ ಕೊರೋನಾ ಅಲೆ ಇಳಿಕೆ: ಚೇತರಿಕೆಯತ್ತ ಎಲ್ಲಾ ನಗರಗಳು

0
🌐 Belgaum News :

ಬೆಂಗಳೂರು: ರಾಜ್ಯದ 30 ಜಿಲ್ಲೆಗಳಲ್ಲಿ ಕೊರೋನಾ ಅಲೆ ಇಳಿಕೆಯಾಗುತ್ತಿದ್ದು, ನಾಳೆ (ಸೋಮವಾರ) ದಿಂದ ಈಡೀ ರಾಜ್ಯವನ್ನು ಅನ್ ಲಾಕ್ ಮಾಡಲಾಗುತ್ತಿದೆ.  ಸದ್ಯ 53,871 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯದಲ್ಲಿ ನಿನ್ನೆ 2,984 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,49,997ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.8.26 ರಿಂದ 8.24ಕ್ಕೆ ಇಳಿಕೆಯಾಗಿದ್ದು, ಶುಕ್ರವಾರ ಒಂದೇ ದಿನ 14,302 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾದ ಹಿನ್ನೆಲೆಯಲ್ಲಿ ಚೇತರಿಕೆ ಪ್ರಮಾಣ ಶೇ.96.47 ರಿಂದ ಶೇ.96.87ಕ್ಕೆ ಏರಿಕೆಯಾಗಿದೆ.

ಈ ನಡುವೆ ರಾಜ್ಯದಲ್ಲಿ ಶುಕ್ರವಾರ 88 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 35,222ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರು ನಗರದಲ್ಲಿ ನಿನ್ನೆ 593 ಹೊಸೇ ಕೇಸ್ ಗಳು ಪತ್ತೆಯಾಗಿದ್ದು, ಬೆಂಗಳೂರು ನಗರದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದೀಗ ಒಟ್ಟಾರೆ 23,760 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');