ಬಿಜೆಪಿ ಸರ್ಕಾರದ ವೈಫಲ್ಯ: ಜುಲೈ 7 ರಂದು ಕಾಂಗ್ರೆಸ್ ದಿಂದ ಸೈಕಲ್ ಜಾಥಾ !

0
🌐 Belgaum News :

ಬೆಳಗಾವಿ : ಸರ್ಕಾರದ ವೈಫಲ್ಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸಿಲು ಜು.7ರಂದು ಸೈಕಲ್ ಜಾಥಾ ನಡೆಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಎಂದು ಕಾಂಗ್ರೆಸ್ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಕರೆ ನೀಡಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ಕೋವಿಡ್ ವೇಳೆಯಲ್ಲಿ ಸರ್ಕಾರದ ವೈಫಲ್ಯ ಕುರಿತು ನಡೆಸಲಿರುವ ಸೈಕಲ್ ಜಾಥಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಂದ ಸಾಕಷ್ಡು ಅವ್ಯವಹಾರ ಆಗಿದೆ ಎಂದು ಆರೋಪಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಚಾಟಿ ಬಿಸುವ ಕೆಲಸ ಮಾಡುತ್ತಿದೆ. ಕೋವಿಡ್ ನಿಂದ ಸಾಕಷ್ಟು ಜನ ಮೃತಪಟ್ಟರೂ ಸರ್ಕಾರ ಮಾತ್ರ ಅಂಕಿಅಂಶಗಳನ್ನು ಮರೆ ಮಾಚುತ್ತಿದೆ ಎಂದು ಹೇಳಿದರು.

ದೇಶದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಯಡಿಯೂರಪ್ಪ ಸರ್ಕಾರದಿಂದ ಜನರಿಗೆ ತೊಂದರೆ ಆಗಿದೆ. ಜನರಿಗೆ ಜಾಗೃತ ಮಾಡಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತೇವೆ. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುವ ಪ್ರಯತ್ನಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಬೇಕು ಎಂದರು.

ಸರ್ಕಾರ ಕೋವಿಡ್ ಸಾವಿನ ಸಂಖ್ಯೆಯನ್ನು ಮರೆ ಮಾಚಿದೆ. ಆದ ಕಾರಣ ಕಾಂಗ್ರೆಸ್ ಕಾರ್ಯಕರ್ತರೇ ಕೋವಿಡ್ ನಿಂದ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬುವುದನ್ನು ಸರ್ವೆ ಮಾಡಿ, ಅಧಿವೇಶನದಲ್ಲಿ ಆಗ್ರಹಗೊಳಿಸಿ ಅರ್ಹ ಫಲಾನುಭವಿಗಳಿಗೆ ಪರಿಹಾರ ಕೊಡಿಸುವ  ಕೆಲಸ ಮಾಡಲಿದ್ದೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಹೇಳಿದರು. ಸಭೆಯಲ್ಲಿ ಕಾಂಗ್ರೆಸ್ ಮುಖಂಡರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷರು, ಕಾರ್ಯಕರ್ತರು ಇದ್ದರು.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');