ಸವದತ್ತಿ ಯಲ್ಲಮ್ಮ , ಜೋಗಳಭಾವಿ ಸತ್ತೆಮ್ಮ ದೇವಿ ದರ್ಶನಕ್ಕೆ ನಿಷೇಧ

0

ಬೆಳಗಾವಿ : ಜಿಲ್ಲೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ಹಾಗೂ  ಜೋಗಳಭಾವಿ ಸತ್ತೆಮ್ಮ ದೇವಿಯ ದೇವಸ್ಥಾನದ ಸಾರ್ವಜನಿಕ ದರ್ಶನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿನ ಅಂಗಡಿ ಮುಗ್ಗಟ್ಟುಗಳನ್ನು ತೆರೆಯುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ನೀಡಿದ್ದಾರೆ.

ಕೋವಿಡ್-19 ಡೆಲ್ಟಾ ಪ್ಲಸ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಕುರಿತು ಮುಂಜಾಗೃತಾ ಕ್ರಮವಾಗಿ ಹಾಗೂ ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆ 2005, “The Karnataka Epidemic Diseases, COVID-19 Regulations, 2020 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿನ ಅಂಗಡಿ ಮುಗ್ಗಟ್ಟುಗಳನ್ನು ತೆರೆಯುವುದನ್ನು ನಿಷೇಧಿಸಿಲಾಗಿದೆ.

ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');