ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಗೆ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರ ಭೇಟಿ

0

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಗೆ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರು ಭೇಟಿ ನೀಡಿ, ಸನ್ಮಾನಸಿದರು.

ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆ ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಹೊಸೂರು ಶಾಸಕ ವೈ. ಪ್ರಕಾಶ್, ಮಾಜಿ ಶಾಸಕರಾದ ಎಸ್.ಎ. ಸತ್ಯ, ಆರ್.ಕೆ. ರಮೇಶ್ ಹಾಗೂ ಬಾಬು ರೆಡ್ಡಿ ಸೇರಿದಂತೆ ಹಲವರು ಶುಭಾಶಯ ಕೋರಲು ಬಂದಿದ್ದಾರೆ.

ಕೆಲಕಾಲ ಮುಖಂಡರೊಂದಿಗೆ ಚರ್ಚೆ ನಡೆಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವೈ. ಪ್ರಕಾಶ್ ಪರ ಡಿ.ಕೆ ಶಿವಕುಮಾರ್ ಪ್ರಚಾರ ನಡೆಸಿದ್ದರು. ಚುನಾವಣೆಯಲ್ಲಿ ಗೆದ್ದ ಹಿನ್ನಲೆಯಲ್ಲಿ ಡಿ.ಕೆ ಶಿವಕುಮಾರ್ ಗೆ ಆಭಿನಂದನೆ ಸಲ್ಲಿಸಲು ವೈ ಪ್ರಕಾಶ್ ಆಗಮಿಸಿದ್ದಾರೆ ಎನ್ನಲಾಗಿದೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');