ಸಿಂಪಲ್ ಆಗಿ ಹುಟ್ಟುಹಬ್ಬದ ಆಚರಿಸಿಕೊಂಡ ಪ್ರಜ್ವಲ್ ದೇವರಾಜ್

0

ಬೆಂಗಳೂರು: ” ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ 35ನೇ ಚಿತ್ರ ‘ಮಾಫಿಯಾ’ದ ಫಸ್ಟ್‌ಲುಕ್‌ ಬಿಡುಗಡೆ ಅಭಿಮಾನಿಗಳು ಪಿಧಾ”  ಆಗಿದ್ದಾರೆ. ಆ ಬಳಿಕ,  ನಿನ್ನೆ  ಸೋಮವಾರ  ಪ್ರಜ್ವಲ್‌ ಅವರ ಜನ್ಮದಿನವೂ ಸಿಂಪಲ್ ಆಗಿ ಮನೆಯಲ್ಲಿ ಆಚರಿಸಿಕೊಂಡಿದ್ದಾರೆ.

ಅಭಿಮಾನಿಗಳು ಕೂಡ ಡೈನಾಮಿಕ್ ಪ್ರಿನ್ಸ್ ಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ತಿಳಿಸಿದ್ದಾರೆ. ಪ್ರಜ್ವಲ್ ದೇವರಾಜ್  ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.   ಕೊರೋನಾ ಹಿನ್ನೆಲೆಯಲ್ಲಿ ಅಭಿಮಾನಿಗಳು ಜಾಲತಾಣಗಳಲ್ಲಿ ಮೂಲಕ ಶುಭಾಶಯ ಕೊಡಬೇಕೆಂದು ಕೇಳಿಕೊಂಡಿದ್ದಾರೆ. ಆ ಬಳಿಕ ಕೇಕ್‌ ಕತ್ತರಿಸಿ ಅವರ ಹುಟ್ಟುಹಬ್ಬ ಆಚರಿಸಿದ್ದಾರೆ.

‘ಮಾಫಿಯಾ’ದ ಚಿತ್ರತಂಡ ಚಿತ್ರದ ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡಿದೆ. ಗುರುದತ್‌ ಗಾಣಿಗ ಅವರು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಅವರು ಈ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಪ್ರಜ್ವಲ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');