ಸರ್ಕಾರಕ್ಕೆ ಅಧಿವೇಶನ ನಡೆಸಲು ಇಚ್ಛಾಶಕ್ತಿ ಕೊರತೆ : ಸತೀಶ ಜಾರಕಿಹೊಳಿ

0
🌐 Belgaum News :

ಗೋಕಾಕ : ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ಗುಡುಗಿದರು.

ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಧಿವೇಶನ ನಡೆಸುವ ಇಚ್ಛಾಶಕ್ತಿ ಇಲ್ಲ. ಆದ ಕಾರಣ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದ ಜನರ ಸಮಸ್ಯೆಗಳನ್ನು ಬಗೆ ಹರಿಸುವ ಮೂಲಕ, ಇಲ್ಲಿನ ಜನತೆ ಆಶೋತ್ತರಿಗಳಿಗೆ ನೆರವಾಗಬೇಕಿದೆ ಎಂದರು.

ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ಕಂಗೆಟ್ಟಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಆಡಳಿತ ಪಕ್ಷದ ನಾಯಕರಲ್ಲಿ ಹೊಂದಾಣಿಕೆ ಕೊರತೆ ಇದೆ ಎಂದು ಹೇಳಿದರು.

ಸರ್ಕಾರ ಯಾವುದೇ ಒಮ್ಮತದ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರದಿಂದ ಸ್ಪಷ್ಟತೆ ಇಲ್ಲ.  ಪರೀಕ್ಷೆ ನಡೆಸುವುದಾದ್ರೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯನ್ನು ನಡೆಸಲಿ. ಇಲ್ಲವಾದ್ರೆ ಎರಡನ್ನು ರದ್ದು ಮಾಡಬೇಕು. ವಿದ್ಯಾರ್ಥಿಗಳಿಗೆ ವಿನಾಕಾರಣ ಸಮಸ್ಯೆಯಾಗಬಾರದು ಎಂದು ತಿಳಿಸಿದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');