ತೈಲ ಬೆಲೆ ಏರಿಕೆ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ನಿಂದ ನಾಳೆ ಸೈಕಲ್ ಜಾಥಾ

0

ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಳಗಾವಿ ಗ್ರಾಮೀಣ ಹಾಗೂ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಜು.8 ರಂದು (ಬುಧವಾರ) ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಿಂದ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ.

ಜಾಥಾದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಶಾಸಕರಾದ ಮಹಾಂತೇಶ ಕೌಜಲಗಿ, ಲಕ್ಷ್ಮಿ ಹೆಬ್ಬಾಳ್ಕರ್, ಡಾ.ಅಂಜಲಿ ನಿಂಬಾಳ್ಕರ್ ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ.

ಪಕ್ಷದ ಕಾರ್ಯಕರ್ತರು ತಮ್ಮ ಸೈಕಲ್ ಗಳೊಂದಿಗೆ, ಕಡ್ಡಾಯವಾಗಿ ಮಾಸ್ಕ್  ಧರಿಸಿಕೊಂಡು ಜಾಥಾದಲ್ಲಿ ಪಾಲ್ಗೊಳ್ಳಬೇಕೆಂದು ಬೆಳಗಾವಿ ಗ್ರಾಮೀಣ ಹಾಗೂ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಹಾಗೂ ರಾಜು ಸೇಠ್ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ./////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');