ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಚಿಕ್ಕೋಡಿಯಲ್ಲಿ ಸೈಕಲ್ ರ್‍ಯಾಲಿ

0

ಚಿಕ್ಕೋಡಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ  ಬುಧವಾರ ಪಟ್ಟಣದಲ್ಲಿ ಸೈಕಲ್ ರ್‍ಯಾಲಿ ಜರುಗಿತು.

ಹುಬ್ಬಳ್ಳಿ ಶಾಸಕ ಪ್ರಸಾದ ಅಬ್ಬಯ್ಯ ಮತ್ತು ಮಾಜಿ ಶಾಸಕ ಬಸನಗೌಡ ಬಾದರಲಿ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಕೆ. ಕಾಲೇಜಿನವರಿಗೆ ರ್‍ಯಾಲಿ ನಡೆಸಲಾಯಿತು.

ರ್‍ಯಾಲಿಗೆ ಚಾಲನೆ ನೀಡಿದ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಕೇಂದ್ರ ಸರ್ಕಾರ ಇಂದನ ಬೆಲೆ ಏರಿಕೆ ಮಾಡುವ ಮುಖಾಂತರ ಬಡವರ ಮೇಲೆ ಗಧಾಪ್ರಹಾರ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಗತ್ಯ ದಿನಸಿ ವಸ್ತುಗಳ ಬೆಲೆ ಗಗನಕ್ಕೇರಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡವರ ಹಿತಕಾಯುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದರು.

ಕಾಂಗ್ರೆಸ್ ಮುಖಂಡ ಮಹಾವೀರ ಮೋಹಿತೆ, ನಾಗರಮುನ್ನೋಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರಗೌಡ ಪಾಟೀಲ, ಎಚ್.ಎಸ್. ನಸಲಾಪೂರೆ, ಧೂಳಗೌಡ ಪಾಟೀಲ, ವೃಷಭ ಪಾಟೀಲ, ರಾಜು ಕೋಟಗಿ, ಯೂಥ್ ಬ್ಲಾಕ್ ಅಧ್ಯಕ್ಷ ಧನರಾಜ ಶೇಂಡೂರೆ, ಯೂಥ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಯಲ್ಲಪ್ಪಾ ಶಿಂಗೆ, ಅಥಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಾರ್ಥ ಶಿಂಗೆ, ಜಿಲ್ಲಾ ಎಸ್ಸಿ, ಎಸ್ಟಿ ಪ್ರಧಾನ ಕಾರ್ಯದರ್ಶಿ ರಾವಸಾಬ ಐಹೊಳೆ, ಸಂಜು ಕಾಂಬಳೆ, ವಿಲೀನರಾಜ ಎಲಮಳೆ ಸೇರಿ ಇನ್ನಿತರರು ಉಪಸ್ಥಿತರಿದ್ದರು.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');