ನಟ ದುನಿಯಾ ವಿಜಯ್‍ಗೆ ಮಾತೃ ವಿಯೋಗ

0

ಬೆಂಗಳೂರು: ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದಿನ ಕಳೆಯುತ್ತಿದ್ದಂತೆಯೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ.

ಈ ಕುರಿತು ಸ್ವತಃ ವಿಜಯ ತನ್ನ ತಾಯಿ ಜೊತೆಗಿನ ಫೋಟೋ ಹಾಕಿ ‘ಮತ್ತೆ ಹುಟ್ಟಿ ಬಾ ಅಮ್ಮ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ನಾರಾಯಣಮ್ಮ ಅವರ  ಅಂತಿಮ ವಿಧಿವಿಧಾನ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದು,  ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.

ಕೆಲ ದಿನಗಳ ಹಿಂದಷ್ಟೇ ಕೋವಿಡ್ ನಿಂದ ದುನಿಯಾ ವಿಜಯ್ ಪೋಷಕರು ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿತ್ತು. ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಗಂಭೀರವಾಗಿದ್ದು, ಪ್ರತಿದಿನ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಅಮ್ಮನಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋದಷ್ಟೇ ನನ್ನ ಆಸೆ. ದಿನಂಪ್ರತಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಆದರೆ ಮತ್ತೆ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವಿದೆ ಎಂದು ದುನಿಯಾ ವಿಜಯ್ ಈ ಹಿಂದೆ ಹೇಳಿದ್ದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');