ಕೇಂದ್ರ ಸಚಿವರಾಗಿ ಎ.ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ: ಯುವಸೇನೆಯಿಂದ ಸಿಹಿ ಹಂಚಿ ಸಂಭ್ರಮಾಚರಣೆ

0

ಶಹಾಪುರ: ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಅವರು ಕೇಂದ್ರ ಸಚಿವರಾಗಿ  ಅಧಿಕಾರ ಸ್ವೀಕಾರದ ಹಿನ್ನೆಲೆ, ಕಲ್ಯಾಣ ಕರ್ನಾಟಕ ಎ.ನಾರಾಯಣಸ್ವಾಮಿ ಯುವಸೇನೆ(ರಿ) ಯು ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಬುಧವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ರಾಜ್ಯಾಧ್ಯಕ್ಷ ಶಿವಕುಮಾರ ದೊಡ್ಮನಿ ಮಾತನಾಡಿ, ನಾಲ್ಕು ಬಾರಿ ಶಾಸಕರಾಗಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಅಭಿವೃದ್ಧಿಯ ಹರಿಕಾರ ಎನಿಸಿಕೊಂಡಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಪ್ರವೇಶಿಸಿ, ಈಗ ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ಸಚಿವ ಸ್ಥಾನ ಪಡೆದಿರುವುದು ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸಿದಂತಾಗಿದೆ.

ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿರವರು ಎ. ನಾರಾಯಣಸ್ವಾಮಿ ಅವರಿಗೆ ಕೇಂದ್ರ ಸಚಿವ ಸ್ಥಾನ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಭೀಮಾಶಂಕರ ಕಟ್ಟಿಮನಿ, ಹೊನ್ನಪ್ಪ ಹೊತಪೇಠ, ಮಾನಪ್ಪ ವಠಾರ, ಸೋಪಣ್ಣ ಸಗರ, ಜಗದೀಶ ಅನವಾರ, ಅವಿನಾಶ ಗುತ್ತೇದಾರ, ರಡ್ಡಿ ಸಗರಕರ್, ವಿಶ್ವ ಶೆಟಗೇರಿ ಇನ್ನೂ ಮುಂತಾದವರು ಇದ್ದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');