ಬಸನಗೌಡ ಪಾಟೀಲ್ ಯತ್ನಾಳ್ ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿ : ಎಂ.ಪಿ. ರೇಣುಕಾಚಾರ್ಯಗುಡುಗು

0

ಬೆಂಗಳೂರು :  ಸ್ವಪಕ್ಷದವರ  ಮೇಲೆ ಅಸಮಾದಾನ ಇದ್ದರೆ,  ಬಸನಗೌಡ ಪಾಟೀಲ ಯತ್ನಾಳ್ ಅವರು ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾರ್ಚಾಯ ಗುಡುಗಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ನಮ್ಮ ಜತೆ 120 ಶಾಸಕರಿದ್ದು, ದೆಹಲಿಗೆ ಹೋಗಿ ನಾಯಕರನ್ನು ಭೇಟಿ ಮಾಡಿ ದೂರು ಕೊಡುತ್ತೇವೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ರೂ ಪದೇ ಪದೆ ಪಕ್ಷದ ವಿರುದ್ಧ ಮಾತನಾಡುತ್ತಿರುವ ಯತ್ನಾಳ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಾತನಾಡಲಿ ಎಂದು ಗರಂ ಆಗಿದ್ದಾರೆ.

ಯಡಿಯೂರಪ್ಪ ಅವರು ಪಕ್ಷ ಕಟ್ಟಿ ಬೆಳೆಸಿದವರು. ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ಒಪ್ಪಲ್ಲ.ನಾಯಕರ ಮಾತು ಕೇಳುವುದು ನಮ್ಮ ತತ್ವ, ಸಲ್ಲದ  ಮಾತನಾಡುವವರು ಮೊದಲ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿ, ಯಡಿಯೂರಪ್ಪ ಟೀಕೆ ಮಾಡುವುದು ಒಂದೇ ಪಕ್ಷದ ವಿರುದ್ಧ ಮಾತನಾಡುವುದೂ ಒಂದೇ ಎಂದು ವಾಗ್ದಾಳಿ ನಡೆಸಿದ್ದಾರೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');