ಬೆಳಗಾವಿ ಮಹಾನಗರ ಪಾಲಿಕೆಯಿಂದ 58 ವಾರ್ಡುಗಳ ವಾರ್ಡ್‍ವಾರು ಅಂತಿಮ ಮತದಾರರ ಪಟ್ಟಿ ಪ್ರಕಟ

0

ಬೆಳಗಾವಿ, ಜು.09: ಬೆಳಗಾವಿ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯ 58 ವಾರ್ಡುಗಳ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿಯನ್ನು ಜುಲೈ 9 2021ರಂದು ಪ್ರಕಟಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ

ದಿನಾಂಕ: 01-01-2021ರ ಅರ್ಹತಾ ದಿನಾಂಕಕ್ಕೆ ಪರಿಷ್ಕರಣೆ ಯಾದ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ದಿನಾಂಕ 18-01-2021ರ ಮತದಾರರ ಪಟ್ಟಿಯ ಡೇಟಾ ಪಡೆದುಕೊಂಡು ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡಗಳು ವಾರ್ಡವಾರು ಕರಡು ಮತದಾರರ ಪಟ್ಟಿಯನ್ನು ಸಿದ್ದಪಡಿಸಿ ದಿನಾಂಕ 28-06-2021ರಂದು ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಕಚೇರಿ, ಮಹಾನಗರಪಾಲಿಕೆಯ ಕಚೇರಿ ಹಾಗೂ ಮತಗಟ್ಟೆ ವ್ಯಾಪ್ತಿಗಳಲ್ಲಿ ಪ್ರಚುರಪಡಿಸಿ ಸಾರ್ವಜನಿಕರಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 01-7-2021 ರ ವರೆಗೆ ಅವಕಾಶ ನೀಡಲಾಗಿತ್ತು.

ಸದರಿ ದಿನಾಂಕದೊಳಗಾಗಿ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ, ಮುದ್ರಕರಿಂದ ಬದಲಾವಣೆಗಳನ್ನು ಮಾಡಿಸಿ, ಚೆಕ್ ಲಿಸ್ಟ್ ಪರಿಶೀಲಿಸಿ ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡುಗಳ ಅಂತಿಮ ಮತದಾರರ ಪಟ್ಟಿಯನ್ನು ಜುಲೈ 9 ರಂದು ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕ ಕಚೇರಿ, ಮಹಾನಗರ ಪಾಲಿಕೆ ಕಚೇರಿ, ಹಾಗೂ ಮತಗಟ್ಟೆ ವ್ಯಾಪ್ತಿಯಲ್ಲಿ ಪ್ರಚುರಪಡಿಸಲಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');