ವಸತಿ ಯೋಜನೆಗಳಡಿ 9 ಲಕ್ಷ ಮನೆಗಳ ನಿರ್ಮಾಣ : ಸಿಎಂ ಬಿಎಸ್ ವೈ

0

ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ ಮುಂದಿನ ಎರಡು ವರ್ಷಗಳಲ್ಲಿ 9 ಲಕ್ಷ ಮನೆ ನಿರ್ಮಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ವಸತಿ ಸಚಿವ ವಿ. ಸೋಮಣ್ಣ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯ ಸರ್ಕಾರ ನಿರ್ಮಾಣ ಮಾಡಲು ಉದ್ದೇಶಿಸಿರುವ ಮನೆಗಳಲ್ಲಿ ರಾಜ್ಯದ ವಸತಿ ಯೋಜನೆಗಳಡಿ 5 ಲಕ್ಷ ಮನೆಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳಡಿ 4 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಪರಿಶಿಷ್ಟ ಸಮುದಾಯಕ್ಕೆ ಸೇರಿದ ಫಲಾನುಭವಿಗಳಿಗೆ 1.75 ಲಕ್ಷ ರೂಪಾಯಿಗಳು ಮತ್ತು ಇತರರಿಗೆ 1.20 ಲಕ್ಷ ರೂಪಾಯಿಗಳಷ್ಟು ಸಹಾಯಧನ ದೊರೆಯುತ್ತದೆ.

ಕೇಂದ್ರದ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳಿಗೆ ಫಲಾನುಭವಿಗಳಿಗೆ ಶೇ. 60 ಅಂದರೆ 72 ಸಾವಿರ ರೂಪಾಯಿಗಳು ಮತ್ತು ರಾಜ್ಯದ ಪಾಲು ಶೇ. 40 ಅಂದರೆ 48 ಸಾವಿರ ರೂ. ಸಹಾಯಧನ ಸೇರಿರುತ್ತದೆ. ಎಲ್ಲ ಯೋಜನೆಗಳನ್ನು ಸೇರಿಸಿಕೊಂಡು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲಾ 100 ಮನೆಗಳನ್ನು ಹಂಚಿಕೆ ಮಾಡಲಾಗುತ್ತದೆ.

ಪ್ರಸ್ತುತ ನಿರ್ಮಾಣದ ವಿವಿಧ ಹಂತಗಳಲ್ಲಿರುವ ರಾಜ್ಯ ಸರ್ಕಾರದ ಬಸವ ವಸತಿ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ, ದೇವರಾಜು ಅರಸು ವಸತಿ ಯೋಜನೆ ಹಾಗೂ ವಾಜಪೇಯಿ ನಗರ ವಸತಿ ಯೋಜನೆಗಳಡಿ ಮನೆಗಳನ್ನು ಪೂರ್ಣ ಮಾಡಲು 6.2 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಹಂತ ಹಂತವಾಗಿ ಈ ಮೊತ್ತವನ್ನು ಬಿಡುಗಡೆ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆಯಲ್ಲಿ ಹೇಳಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');