ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಉಗ್ರರ ಬಲಿ..!

0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಶನಿವಾರ ನಡೆದ ಭದ್ರತಾ ಪಡೆ ಹಾಗೂ ಉಗ್ರರ ನಡುವಿನ ಮುಖಾಮುಖಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ರಾಣಿಪೋರಾ ಪ್ರದೇಶದ ಕ್ವಾರಿಗಂನಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಅಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಇದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಪಡೆಗಳು ಶೋಧ ನಡೆಸುತ್ತಿರುವಾಗ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿದರು. ಈ ವೇಳೆ ಭದ್ರತಾ ಪಡೆ ಸಹ ಗುಂಡಿನ ವಿನಿಮಯ ಮಾಡಿದ್ದು ಇದರಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು ಎಂದು ಅಧಿಕಾರಿಗಳು  ಹೇಳಿದರು. ಹತ್ಯೆಗೀಡಾದ ಭಯೋತ್ಪಾದಕರ ಗುರುತು ಮತ್ತು ಸಂಪರ್ಕ ಪತ್ತೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');