ಬಿಜೆಪಿಯವರ ಅಪಪ್ರಚಾರಕ್ಕೆ ಉತ್ತರ ನೀಡಲು ಕಾಂಗ್ರೆಸ್ ಕಾರ್ಯತಕರ್ತರು ಸಜ್ಜಾಗಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

0

ರಾಯಬಾಗ: “ಬಿಜೆಪಿಯವರ ಅಪಪ್ರಚಾರಕ್ಕೆ ಉತ್ತರ ನೀಡಲು ಕಾಂಗ್ರೆಸ್ ಕಾರ್ಯತಕರ್ತರು ಸಜ್ಜಾಗಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕರೆ ನೀಡಿದರು.

ಕುಡಚಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಯಬರಟ್ಟಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ಪರ ಪ್ರಚಾರ ಮಾಡಲು ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡಲು ಬಿಜೆಪಿವರು ದೊಡ್ಡ ಪಡೆಯನ್ನೇ ಇಟ್ಟಿದ್ದಾರೆ. ಇವರನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರು ಕೂಡ ಸಿದ್ಧರಾಗಬೇಕು. ಅಪಪ್ರಚಾರಗಳಿಗೆ ತಕ್ಕ ತಿರುಗೇಟು ನೀಡಬೇಕು” ಎಂದು ಸಲಹೆ ನೀಡಿದರು.

ವರ್ಷದ ಮುಂಚೆಯೇ ಅಭ್ಯರ್ಥಿಗಳ ಘೋಷಣೆ:

“ಚುನಾವಣೆ 15 ದಿನಗಳಿದ್ದಾಗ ಅಭ್ಯರ್ಥಿಯನ್ನು ಘೋಷಿಸಿದರೇ ಗೆಲ್ಲಲು ಸಾಧ್ಯವಿಲ್ಲ. ಹೀಗಾಗಿ, ಮುಂಬರುವ ವಿಧಾನಸಭಾ ಚುನಾವಣೆಗೆ ವರ್ಷದ ಮುಂಚೆಯೇ ಅಭ್ಯರ್ಥಿಗಳನ್ನು ಘೋಷಿಸಲಾಗುವುದು. ಕಾರ್ಯಕರ್ತರು ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕು” ಎಂದು ಹೇಳಿದರು.

ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರು:

ಇದೇ ಸಂದರ್ಭದಲ್ಲಿ ಸತೀಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಮೂಗಳಖೋಡ ಪಟ್ಟಣದ ನೂರಾರು ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಯಾದರು. ಸತೀಶ ಹಾಗೂ ಮುಖಂಡರು ಕಾರ್ಯಕರ್ತರನ್ನು ಬರಮಾಡಿಕೊಂಡರು.

ಮಾರುತಿ ಗಲಗಲಿ, ಆನಂದ ಮೊಳೆ, ಹನುಮಂತ ತಳವಾರ, ಸಂಕ್ರೆವ್ವ ಗಾಣಿಗೇರ, ಮಹೇಂದ್ರ ಸೇರಿ ನೂರಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು./////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');