ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಎಚ್.ಬಿ.ಪಾಟೀಲ ಅಭಿಮತ ಬಸವೇಶ್ವರ ಸಮಾಜ ಸೇವಾ ಬಳಗ ಆಯೋಜನೆ ಕುಟುಂಬ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಅಗತ್ಯ

0

ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಎಚ್.ಬಿ.ಪಾಟೀಲ ಅಭಿಮತ 

ಬಸವೇಶ್ವರ ಸಮಾಜ ಸೇವಾ ಬಳಗ ಆಯೋಜನೆ  ಕುಟುಂಬ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಅಗತ್ಯ

ಕಲಬುರಗಿ: ಯಾವುದೇ ರಾಷ್ಟ್ರದ ಅಭಿವೃದ್ಧಿಯನ್ನು ನಿರ್ಧರಿಸುವಲ್ಲಿ ಅಲ್ಲಿನ ಜನಸಂಖ್ಯೆಯ ಪ್ರಮಾಣವು ಅತ್ಯಂತ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. ಜನಸಂಖ್ಯೆ ಮಿತಿ ಮೀರಿದಾಗ ರಾಷ್ಟದ ಅಭಿವೃದ್ಧಿಗೆ ತೊಡಕಾಗುವದರಿಂದ ಅದನ್ನು ನಿಯಂತ್ರಿಸಿ, ಆದರ್ಶ ಜನಸಂಖ್ಯೆಯನ್ನಾಗಿಯನ್ನಾಗಿಸುವಲ್ಲಿ ಇಬ್ಬರು ಮಕ್ಕಳು, ಅವರಿಬ್ಬರ ನಡುವೆ ಅಂತರದಂತಹ ಕ್ರಮಗಳನ್ನು ಹೊಂದಿರುವ ಕುಟುಂಬ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆಯೆಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ.ಪಾಟೀಲ ಅಭಿಮತ ವ್ಯಕ್ತಪಡಿಸಿದರು.
ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ‘ಎಂ.ಎಂ.ಎನ್ ಟ್ಯೂಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಜರುಗಿದ ‘ವಿಶ್ವ ಜನಸಂಖ್ಯಾ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಎಲ್ಲಿ ಜೀವನ ಹಾಗೂ ಶಿಕ್ಷಣ ಮಟ್ಟಗಳು ಹೆಚ್ಚಾಗಿರುತ್ತವೆಯೋ, ಅಲ್ಲಿ ಜನಸಂಖ್ಯೆ ಕಡಿಮೆಯಿರುವುದರಿಂದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜನಸಂಖ್ಯಾ ಸ್ಪೋಟದಿಂದಾಗಿ ಜಗತ್ತಿನಲ್ಲಿ ಲಭ್ಯವಿರುವ ಸೀಮಿತ ಸಂಪನ್ಮೂಲಗಳ ಮೇಲೆ ತೀವ್ರವಾದ ಪರಿಣಾಮವನ್ನು ಬೀರುತ್ತಿದೆ. ಜನಸಂಖ್ಯೆಯ ಧನಾತ್ಮಕ ಮತ್ತು ಋಣಾತ್ಮಕ ಸಂಗತಿಗಳ ಬಗ್ಗೆ ವಿದ್ಯಾರ್ಥಿ ದೆಸೆಯಿಂದಲೇ ತಿಳಿದುಕೊಂಡು ಅದರ ಬಗ್ಗೆ ಕಾಳಜಿ ವಹಿಸಿ, ಜಾಗೃತಿಯನ್ನುಂಟು ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ. ಜನಸಂಖ್ಯಾ ಸ್ಫೋಟದಿಂದಾಗಿ ಅನೇಕ ಸಮಸ್ಯೆಗಳು ಉಂಟಾಗುತ್ತಿದ್ದು, ಅದರ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆಯೆಂದರು.
ಪ್ರಮುಖರಾದ ಬಸವರಾಜ ಹೆಳವರ ಯಾಳಗಿ, ಬಸಯ್ಯಸ್ವಾಮಿ ಹೊದಲೂರ, ಬಸವರಾಜ ಎಸ್.ಪುರಾಣೆ, ದೇವೇಂದ್ರಪ್ಪ ಗಣಮುಖಿ,ಅಮರ ಜಿ.ಬಂಗರಗಿ, ಓಂಕಾರ ಗೌಳಿ, ಗಣೇಶ ಗೌಳಿ, ಶಾಶ್ವತ್, ಸಂದೀಪ ಸೇರಿದಂತೆ ಮತ್ತಿತರರಿದ್ದರು.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');