ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹುಕ್ಕೇರಿ ಹಿರೇಮಠದ ಶಾಖೆಗೆ ಭೇಟಿ

0

ಬೆಳಗಾವಿ:ಬೆಳಗಾವಿ ನಗರದಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಎಲ್ಲಾ ಸಮುದಾಯ, ಸಂಪ್ರದಾಯ ಮತ್ತು ಸಮಾಜ ಸೇವಕರನ್ನು ಒಗ್ಗೂಡಿಸುವ ಕೇಂದ್ರವಾಗಿ ಹೊರ ಹೊಮ್ಮುತ್ತಿದೆ ಎಂದು ವಿಧಾನ ಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

ಅವರು ಭಾನುವಾರ ನಗರದ ಹುಕ್ಕೇರಿ ಹಿರೇಮಠದ ಶಾಖೆಗೆ ಭೇಟಿ ನೀಡಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದು ಮಾತನಾಡಿದರು. ಹುಕ್ಕೇರಿ ಹಿರೇಮಠದಲ್ಲಿ ಜಾತಿ, ಮತ, ಪಂಥಗಳ ಗೊಡುವೆಗಳಿಲ್ಲ. ಬಂದವರನ್ನು ಗೌರವಿಸಿ, ಮಾರ್ಗದರ್ಶನ ಪಡೆಯುವವರಿಗೆ, ಮಾರ್ಗದರ್ಶನ ನೀಡಿ ಪ್ರೀತಿಯಿಂದ ಕಾಣುವ ಅಪರೂಪದ ಕೇಂದ್ರವಾಗಿದೆ ಎಂದರು.

ಬೆಳಗಾವಿ ಹುಕ್ಕೇರಿ ಹಿರೇಮಠ ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಸರಕಾರಕ್ಕೆ ಸಲಹೆ, ಮಾರ್ಗದರ್ಶನಗಳನ್ನು ನೀಡುತ್ತಾ ಬಂದಿದ್ದಾರೆ. ಅಲ್ಲದೆ, ಶ್ರೀಗಳು ಪ್ರವಾಹ ಬಂದ ಸಂದರ್ಭದಲ್ಲಿ ಎಲ್ಲ ಸಮುದಾಯದ ಜನರಿಗೆ ಕೈ ತುತ್ತು ನೀಡಿ ಆತ್ಮಸ್ಥೈರ್ಯ ತುಂಬವ ಕೆಲಸ ಮಾಡಿರುವುದು ಅಭಿಮಾನದ ಸಂಗತಿ ಎಂದು ಹೇಳಿದರು.

ಕೊರೋನಾ ಸಂದರ್ಭದಲ್ಲಿಯೂ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಗಳನ್ನು ಮಾಡಿಕೊಂಡು ಕೊವೀಡ್ ತೊಲಗಿಸಲು ಧನ್ವಂತರಿ ಹೋಮ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ರಾಜ್ಯದ ಎಲ್ಲ ಕಡೆ ಈ ಹೋಮ ಮಾಡಿಸುವಂತೆ ಸಲಹೆ ನೀಡಿದ್ದರು. ಅಲ್ಲದೆ ಜಿಲ್ಲೆಯ ಜನರ ಅನಕೂಲಕ್ಕಾಗಿ ಶ್ರೀಗಳು ಎರಡು ಅಂಬುಲೆನ್ಸ್‍ಗಳನ್ನು ಸರಕಾರಕ್ಕೆ ಮಾದರಿಯಾಗಿರುವುದು ಹೆಮ್ಮೆಯ ಸಂಗತಿ ಎಂದರು.

ಆಶೀರ್ವಾದ ಮಾಡಿ ಮಾತನಾಡಿದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಕೆಎಲ್‍ಇ ಕಾರ್ಯಾಧ್ಯಕ್ಷರು, ಹಿರಿಯ ರಾಜಕಾರಣಿ ಡಾ. ಪ್ರಭಾಕರ ಕೋರೆ ಅವರ ಮಾರ್ಗದರ್ಶನದಲ್ಲಿ ಅಪರೂಪವಾದ ಕಾರ್ಯವನ್ನು ಮಹಾಂತೇಶ ಕವಟಗಿಮಠ ಅವರು ಮಾಡುತ್ತಿದ್ದಾರೆ. ಸದ್ಯ ರಾಜ್ಯದ ತುಂಬ ತಮ್ಮದೆಯಾದ ದಾಟಿಯಲ್ಲಿ ಸಾಮಾಜಿಕ ಕಾರ್ಯ ಮಾಡುವುದರ ಮೂಲಕ ಜನಮನ ಗೆದ್ದಿದ್ದಾರೆ. ಅಧಿಕಾರ ಅದು ಭಗವಂತ ಕೊಟ್ಟ ಅವಕಾಶ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಜನಪರ ಕಾರ್ಯಗಳನ್ನು ಇನ್ನೂ ಹೆಚ್ಚು ಮಾಡಲಿ ಎಂದರು.

ಈ ಸಂದರ್ಭದಲ್ಲಿ ಸುವಿಚಾರ ಚಿಂತನ ಬಳಗದ ಎಲ್ಲ ಸದಸ್ಯರು ಉಪಸ್ಥಿತರಿದ್ದರು

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');