ಯಡಿಯೂರಪ್ಪ ಅವರು ಲಿಂಗಾಯತ ಅಗ್ರಗಣ್ಯ ನಾಯಕ, ಮರ್ಯಾದೆಯಿಂದ ನಡೆಸಿಕೊಳ್ಳಿ: ಎಂ.ಬಿ.ಪಾಟೀಲ್

0

ಬೆಂಗಳೂರು: ಇದೇ ಜುಲೈ 26ಕ್ಕೆ ಯಡಿಯೂರಪ್ಪನವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿ 2 ವರ್ಷ ತುಂಬುತ್ತಿದೆ. ಆ ಸಂದರ್ಭದಲ್ಲಿಯೇ ಅವರು ಪದತ್ಯಾಗ ಮಾಡಲಿದ್ದಾರೆ ಎಂಬುವ ವಿಚಾರಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಎಸ್.ಯಡಿಯೂರಪ್ಪ ಲಿಂಗಾಯತ ಸಮುದಾಯದ ಅಗ್ರಗಣ್ಯ ನಾಯಕರು, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ  ಎಂದು ಆಡಳಿತ ಪಕ್ಷದರಿಗೆ ಬುದ್ಧಿವಾದ ಹೇಳಿದ್ದಾರೆ.

“ಕರ್ನಾಟಕ ಸಿಎಂ ಬದಲಾವಣೆಯಾಗಲಿದ್ದಾರೆ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾತು” ಎಂಬ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು ಹೊಸ ಚರ್ಚೆಗಳಿಗೆ ದಾರಿಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಎಂ.ಬಿ. ಪಾಟೀಲ್‌ ಅವರ ಪ್ರತಿಕ್ರಿಯೆ ಬಂದಿದೆ.

“ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ” ಎಂದು ಟ್ವೀಟ್ ಮಾಡಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');