ದಂಪತಿ ನಡುವೆ ಗಲಾಟೆ; ಮನನೊಂದು ಗೃಹಿಣಿ ಆತ್ಮಹತ್ಯೆ

0

ಮೈಸೂರು: ಜೀವನದಲ್ಲಿ ಜಿಗುಪ್ಸೆಯಾಗಿ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಪಲ್ಲವಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಮೈಸೂರಿನ ವಿನಾಯಕ ನಗರದಲ್ಲಿ ನಡೆದಿದೆ. ದಂಪತಿಗಳ ನಡುವೆ ಆಗುತ್ತಿರುವ ಜಗಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಪಲ್ಲವಿ ಮೂಲತಃ ಹುಣಸೂರು ತಾಲೂಕು ಹಳ್ಳದಕೊಪ್ಪಲು ಗ್ರಾಮದ ನಿವಾಸಿಯಾಗಿದ್ದಾರೆ. ಗಂಡ ಹೆಂಡತಿ ನಡುವೆ ಚಿಕ್ಕ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');