ಆಟೋ- ಲಾರಿ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ

0

ಹುಬ್ಬಳ್ಳಿ : ಲಾರಿ ಆಟೋ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ವರೂರಿಗೆ ಆಟೋ ಹೊರಟಿತ್ತು, ಎದುರಿನಿಂದ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಲಾರಿ ಚಾಲಕ ಪರಾರಿಯಾಗಿದ್ದು, ಸಾವಿಗೀಡಾದ ವ್ಯಕ್ತಿಗಳ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');