ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ವ್ಯಕ್ತಿಯನ್ನು ಕೊಲೆ

0

ರಾಯಚೂರು: ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನ ಗುಂತಗೋಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮೌನೇಶ್ ನಾಯಕ(38) ಕೊಲೆಯಾದ ವ್ಯಕ್ತಿ. ಅನೈತಿಕ ಸಂಬಂಧದ ಶಂಕೆ ಕೊಲೆಗೆ ಕಾರಣವಾಗಿದೆ. ಕೊಲೆ ಆರೋಪಿ ಗ್ರಾಮದ ಗುಂಡಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಯಾದ ಮೌನೇಶ್ ನಾಯಕ ತನ್ನ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಕೊಲೆ ಮಾಡಿದ್ದಾನೆ. ಬುಧವಾರ ರಾತ್ರಿ 11 ಗಂಟೆಗೆ ಘಟನೆ ನಡೆದಿದೆ.

ರಾತ್ರಿ ವೇಳೆ ಮೌನೇಶ್‍ಗಾಗಿ ಹೊಂಚು ಹಾಕಿ ಕಾದು ಕುಳಿತು ಆರೋಪಿ ದಾಳಿ ಮಾಡಿದ್ದಾನೆ ಎಂದು ಪೊಲೀಸ್ ವಿಚಾರಣೆಯಲ್ಲಿ ತಿಳಿದು ಬಂದಿದೆ.

ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗುಂಡಪ್ಪನ ವಿಚಾರಣೆ ಮುಂದುವರಿದಿದೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');