ಧಾರಾಕಾರ ಮಳೆಗೆ ಭಾರೀ ಭೂಕುಸಿತ : 30 ಮಂದಿ ಸಾವು

0
🌐 Belgaum News :

ಮುಂಬೈ : ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ರಾಯಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಭಾರೀ ಭೂಕುಸಿತ ಉಂಟಾಗಿ 30 ಮಂದಿ ಮೃತಪಟ್ಟಿದ್ದಾರೆ.

ಕರಾವಳಿ ರಾಯಗಢ ಜಿಲ್ಲೆಯ ಮಹದ್ ಟೆಹ್ಸಿಲ್ ನ ತಲೈ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು ಮೃತಪಟ್ಟವರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೂಕುಸಿತ ಉಂಟಾದ ಪ್ರದೇಶದಿಂದ 30 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನಷ್ಟು ಮಂದಿ ಸಿಲುಕಿ ಹಾಕಿಕೊಂಡಿರುವ ಶಂಕೆಯಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್)ಯ ತಂಡ ಮುಂಬೈಯಿಂದ 160 ಕಿಲೋ ಮೀಟರ್ ದೂರದಲ್ಲಿರುವ ಮಹಡ್ ಗೆ ತಲುಪಿದ್ದು ಮತ್ತೊಂದು ತಂಡ ಕೂಡ ಸದ್ಯದಲ್ಲಿಯೇ ಸ್ಥಳಕ್ಕೆ ಆಗಮಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');