ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 10,000 ಕ್ಯೂಸೆಕ್ ನೀರು ಬಿಡುಗಡೆ : ಆತಂಕ

0
🌐 Belgaum News :

ಬೆಳಗಾವಿ : ಪಶ್ಚಿಮ ಘಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.

ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ನದಿ, ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗಿದೆ. ಸುಮಾರು 10,000 ಕ್ಯೂಸೆಕ್ ನೀರನ್ನು ಇಂದು ಬೆಳಿಗ್ಗೆ 8 ಗಂಟೆ ಕೊಯ್ನಾ ಡ್ಯಾಂನಿಂದ ಕೃಷ್ಣಾ ನದಿಗೆ ಬಿಡಲಾಗಿದೆ.

ಮಳೆ ಆರ್ಭಟ ಹೆಚ್ಚಾಗುತ್ತಿದ್ದು ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು. ಜನ ಕೂಡ ನದಿ ತೀರದ ಕಡೆ ತೆರಳದೇ ಮುಂಜಾಗ್ರತೆ ವಹಿಸಬೇಕಿದೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');