ಚೋರ್ಲಾ ಘಾಟ್ ನ ಹಲವೆಡೆ ಗುಡ್ಡ ಕುಸಿತ;

0
🌐 Belgaum News :

ಪಣಜಿ: ಗೋವಾ ಮತ್ತು ಕರ್ನಾಟಕದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಳಗಾವಿ-ಗೋವಾ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆಯಲ್ಲಿ ಹಲವೆಡೆ ಗುಡ್ಡ ಕುಸಿತ ಉಂಟಾಗಿದ್ದು, ಸಂಪರ್ಕ ಕಡಿತಗೊಂಡಿದೆ.

ಚೋರ್ಲಾ ಘಾಟ್ ರಸ್ತೆಯಲ್ಲಿ ಹಲವೆಡೆ ಮರ ಮತ್ತು ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿರುವುದರಿಂದ ತೆರವುಗೊಳಿಸಲು ಹೆಚ್ಚಿನ ಸಮಯ ಹಿಡಿಯಲಿದೆ ಎಂದೇ ಹೇಳಲಾಗುತ್ತಿದೆ.

ಕಳೆದ ಕೆಲ ದಿನಗಳಿಂದ ಅನಮೋಡ ಘಾಟ್ ರಸ್ತೆಯ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಬೆಳಗಾವಿ ಭಾಗಕ್ಕೆ ತೆರಳುವ ಎಲ್ಲ ವಾಹನಗಳನ್ನು ಚೋರ್ಲಾ ಘಾಟ್ ಮೂಲಕ ತೆರಳಲು ವ್ಯವಸ್ಥೆ ಮಾಡಲಾಗಿತ್ತು. ಮತ್ತು ಭಾರಿ ವಾಹನಗಳನ್ನು ಕಾರವಾರ ಮಾರ್ಗವಾಗಿ ತೆರಳಲು ಜಿಲ್ಲಾಡಳಿತ ಸೂಚನೆ ಹೊರಡಿಸಿತ್ತು. ಇದೀಗ ಚೋರ್ಲಾ ಘಾಟ್ ರಸ್ತೆ ಬಂದ್ ಆಗಿದೆ.

ರೈಲು ಹಳಿ ಮೇಲೆ ಕುಸಿದ ಗುಡ್ಡ:

ದೂದ್ ಸಾಗರ್ ಬಳಿ ಇಂದು ನಸುಕಿನ ಜಾವ ರೈಲು ಹಳಿ ಮೇಲೆ ಗುಡ್ಡ ಕುಸಿದ ಪರಿಣಾಮ ಸಂಚಾರ ಅಸ್ತವ್ಯಸ್ಥಗೊಂಡಿದೆ. ಈ ಮಾರ್ಗವಾಗಿ ಮುಂಬೈ, ದೆಹಲಿ ಸೇರಿ ಇತರೆಡೆ ಸಂಚರಿಸುವ ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ.

 

ಹಳಿ ಮೇಲಿನ ಮಣ್ಣು ತೆರವುಗೊಳಿಸಲು ಕಾರ್ಯಾಚರಣೆ ಮುಂದುವರೆದಿದ್ದು, ಈಗಾಗಲೇ ಎರಡು ಜೆಸಿಬಿ ಹಾಗೂ ಹಿಟಾಚಿ ಮೂಲಕ ಕಾರ್ಯಾಚರಣೆ ಮಾಡಲಾಗುತ್ತಿದೆ. ಬಿಟ್ಟು ಬಿಡದೇ ಮಳೆ ಸುರಿಯುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗುತ್ತಿದೆ. ಸಂಜೆಯವರೆಗೂ ಮಣ್ಣನ್ನು ತೆರವುಗೊಳಿಸಲಾಗುವುದು ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');