ಉಕ್ಕಿ ಹರಿಯುತ್ತಿರುವ ವೇದಗಂಗಾ ನದಿ; ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ನದಿತೀರದ ಗ್ರಾಮಸ್ಥರ ಸ್ಥಳಾಂತರಕ್ಕೆ ಕ್ರಮ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ

0
🌐 Belgaum News :

ಬೆಳಗಾವಿ, ಜು.23 : ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವುದರಿಂದ ನದಿತೀರದ ಗ್ರಾಮಗಳ ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ವೇದಗಂಗಾ ನದಿಯು ಅಪಾಯಮಟ್ಟದಲ್ಲಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ (ಜು.23) ನಿಪ್ಪಾಣಿ ತಾಲ್ಲೂಕಿನ ಕೋಡಣಿ ಗ್ರಾಮ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಅವರು ಪರಿಶೀಲಿಸಿದರು.
ತುರ್ತು ಸಂದರ್ಭದಲ್ಲಿ ನದಿತೀರದ ಗ್ರಾಮಗಳ ಜನರ ಸ್ಥಳಾಂತರಕ್ಕೆ ಈಗಾಗಲೇ ಗುರುತಿಸಲಾಗಿರುವ ಕಾಳಜಿ ಕೇಂದ್ರಗಳಲ್ಲಿ ಜನರಿಗೆ ತಾತ್ಕಾಲಿಕ ಊಟೋಪಹಾರ ಹಾಗೂ ವಸತಿ ಸೌಕರ್ಯ ಕಲ್ಪಿಸಲಾಗಿದೆ.
ಕೆಲವು ಗ್ರಾಮಗಳ ಜನರು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದು, ಕೆಲವು ಕುಟುಂಬಗಳು ತಮ್ಮ ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆದುಕೊಂಡಿರುತ್ತಾರೆ. ಆದರೆ ಪ್ರವಾಹದಿಂದ ಬಾಧಿತಗೊಳ್ಳಬಹುದಾದ ನದಿತೀರದ ಎಲ್ಲ ಗ್ರಾಮಗಳ ಜನರ ಸ್ಥಳಾಂತರಕ್ಕೆ ಅನುಕೂಲವಾಗುವಂತೆ ಕಾಳಜಿ ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದೆ.
ಯಾವುದೇ ಗ್ರಾಮಸ್ಥರು ಭಯಪಡುವ ಅಗತ್ಯವಿಲ್ಲ; ಪ್ರತಿ ತಾಲ್ಲೂಕು ಹಾಗೂ ಗ್ರಾಮಮಟ್ಟದಲ್ಲೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ತುರ್ತು ಸಂದರ್ಭದಲ್ಲಿ ಜನರು ಹಾಗೂ ಜಾನುವಾರುಗಳ ಸ್ಥಳಾಂತರಕ್ಕೆ ತಕ್ಷಣವೇ ಅವರು ಕ್ರಮ ಕೈಗೊಳ್ಳಲಿದ್ದಾರೆ.
ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್. ತಂಡಗಳು ಕೂಡ ಜಿಲ್ಲೆಯಲ್ಲಿ ಬೀಡು ಬಿಟ್ಟಿರುವುದರಿಂದ ಜನರ ರಕ್ಷಣೆಗೆ ಕ್ರಮ ಕೈಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.
ಕೊಯ್ನಾ ಜಲಾಶಯ ವ್ಯಾಪ್ತಿಯಲ್ಲಿ ಇಂದು ಮಳೆಯ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಜಲಾಶಯಗಳಿಂದ ನಿರಂತರವಾಗಿ ನೀರು ಬಿಡುಗಡೆ ಮಾಡಲಾಗುತ್ತಿರುವುದರಿಂದ ಪ್ರವಾಹಭೀತಿ ಕಡಿಮೆಯಾಗುತ್ತಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳು ವೇದಗಂಗಾ ಸೇತುವೆ, ನಿಪ್ಪಾಣಿ ತಾಲ್ಲೂಕಿನ ಕೋಡಣಿ ಗ್ರಾಮ, ಮಮದಾಪುರ, ಸಂಕೇಶ್ವರ ಪಟ್ಟಣದ ಕುಂಬಾರ ಓಣಿ, ಮಠಗಲ್ಲಿ, ಶಂಕರಲಿಂಗ ದೇವಸ್ಥಾನದ ಬಳಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಇದಾದ ಬಳಿಕ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಸೇತುವೆ ಬಳಿ ಕೃಷ್ಣಾ ನದಿ ಹರಿವು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಚಿಕ್ಕೋಡಿಯಲ್ಲಿ ಸಭೆ ನಡೆಸಿದ ಜಿಲ್ಲಾಧಿಕಾರಿ ಹಿರೇಮಠ ಅವರು, ಮಹಾರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ಎಲ್ಲ ನೋಡಲ್ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದುಕೊಂಡು ಪರಿಸ್ಥಿತಿಯ ಮೇಲೆ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.////

 

ವ್ಯಾಪಕ ಮಳೆ: ಪ್ರವಾಹ ನಿರ್ವಹಣೆಗೆ ಎಲ್ಲಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ


ಬೆಳಗಾವಿ ಜು. 23 : ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಪ್ರವಾಹ ಹಾವಳಿ ಹೆಚ್ಚುತ್ತಿರುವ ಕಾರಣ ಜನ-ಜಾನುವಾರಗಳ ರಕ್ಷಣೆಗಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾ ಉಸ್ತವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರದು, ಔಷಧೋಪಚಾರದೊಂದಿಗೆ ಜನರ ಆರೋಗ್ಯ ಹಾಗೂ ಜಾನುವಾರುಗಳಿಗೆ ಆಹಾರ ವ್ಯವಸ್ಥೆಯನ್ನು ಮಾಡುವುದು ಹಾಗೂ ರಸ್ತೆ ಸೇತುವೆ ಹಾಳಾಗಿದ್ದರೆ ಕೂಡಲೇ ದುರಸ್ತಿ, ಕೆರೆ ಕಟ್ಟೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ಎಲ್ಲಾ ಕೆಲಸಗಳನ್ನೂ ಮುತುವರ್ಜಿಯಿಂದ ಅತ್ಯಂತ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು.
ಈ ನಿಟ್ಟಿನಲ್ಲಿ ಸರಕಾರದ ವಿವಿಧ ಇಲಾಖೆಗಳ ಮೂಲಕ (ಆರೋಗ್ಯ, ಕಂದಾಯ, ಲೋಕೋಪಯೋಗಿ, ಪೆÇಲೀಸ್) ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಮಾಡಬೇಕು ಹಾಗೂ ಜನರ ರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯ ಎಲ್ಲಾ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸುವಂತೆ ಸೂಕ್ತ ಸೂಚನೆ ನೀಡುವದು ಹಾಗೂ ಕರ್ತವ್ಯಲೋಪ ಮಾಡುವಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಹಾಗೂ ಎಲ್ಲಾ ಕಾರ್ಯಗಳನ್ನು ಅತ್ಯಂತ ಜಾಗೂಕತೆಯಿಂದ ನಿರ್ವಹಿಸಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');