ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೂಚನೆ

0
🌐 Belgaum News :

 

ಬೆಳಗಾವಿ ಜು.23: ಚರಂಡಿ ನೀರಿನಲ್ಲಿ, ಮನೆಗಳಲ್ಲಿ, ಟೈಯರ್ ಹಾಗೂ ಸಿಮೆಂಟಿನ ತೊಟ್ಟಿಯಲ್ಲಿ ವಾಸಿಸುವ ಸೊಳ್ಳೆಗಳಿಂದ ಡೆಂಗೀ ಚಿಕನ್ ಗುನ್ಯ ಗಳಂತಹ ರೋಗಗಳು ಹರಡದಂತೆ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಅಶೋಕ ದುಡಗುಂಟಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ಶುಕ್ರವಾರ (ಜು.23) ನಡೆದ ಡೆಂಗೀ ಮತ್ತು ಚಿಕುನ್ ಗುನ್ಯ ರೋಗವಾಹಕ ಸೊಳ್ಳೆಗಳ ನಿಯಂತ್ರಣ ಕಾರ್ಯಕ್ರಮದಲ್ಲಿ ಭಿತ್ತಿ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮನೆಯ ಸುತ್ತ ಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಹಾಗೂ ಬೇವಿನ ಹೊಗೆ ಹಾಕುವುದರಿಂದ ಸೊಳ್ಳೆಗಳನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗುತ್ತದೆ.

ಸಂಜೆ ವೇಳೆಯಲ್ಲಿ ಬೇವಿನ ಹೋಗೆ ಹಾಕುವದು ಸೊಳ್ಳೆ ಬತ್ತಿಗಳನ್ನು ಬಳಸುವದು, ಹಾಗೂ ಮನೆಯ ಸುತ್ತ ಮುತ್ತಲು ನೀರು ನಿಲ್ಲದಂತೆ ಗುಂಡಿಗಳನ್ನು ಮುಚ್ಚುವುದು, ಸೊಳ್ಳೆ ಪರದೆಗಳನ್ನು ಬಳಸುವದು ಮನೆಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡುವುದು ಮತ್ತು ನೀರು ನಿಲ್ಲದಂತೆ ಮಾಡಿ
ಸೊಳ್ಳೆಗಳು ಉತ್ಪತ್ತಿ ಆಗದಂತೆ ಕ್ರಮವನ್ನು ಕೈಗೊಳ್ಳಬೇಕೆಂದು ಹೇಳಿದರು.
ಮಲೇರಿಯ ಚಿಕನ್ ಗುನ್ಯಾ, ಡೆಂಗ್ಯೂ ಮೆದುಳು ಜ್ವರ ಹಾಗೂ ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧ ಪಟ್ಟ ಇಲಾಖೆಯವರಿಗೆ ಸೂಚನೆ ನೀಡಿದರು.

ವಯೋವೃದ್ದರಲ್ಲಿ, ಮಕ್ಕಳಲ್ಲಿ ಹಾಗೂ ಗರ್ಭಿಣಿ ಸ್ತ್ರೀಯರಲ್ಲಿ ಡೆಂಗ್ಯೂ ಹೆಚ್ಚಿ

ನ ಪ್ರಮಾಣದಲ್ಲಿ ಕಂಡು ಬರುತ್ತಿದ್ದು, ಇದಕ್ಕೆ ಮೂಲ ಕಾರಣ ಸೊಳ್ಳೆ ಆಗಿದ್ದು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.
ಜಿಕಾ ವೈರಸ್ ಹಾಗೂ ಮಲೇರಿಯ ಚಿಕನ್ ಗುನ್ಯಾ, ಡೆಂಗ್ಯೂ ಮೆದುಳು ಜ್ವರ ಇವುಗಳಿಗೆ ಮೂಲ ಕಾರಣ ಸೊಳ್ಳೆಗಳಗಿದ್ದು ಸೊಳ್ಳೆಗಳ ನಿಯಂತ್ರಣದಿಂದ ಹಾಗೂ ಮುನ್ನೆಚ್ಚರಿಕಾ ಕ್ರಮಗಳಿಂದ ಈ ರೋಗಗಳನ್ನು ಬರದಂತೆ ಹರಡದಂತೆ ನಿಯಂತ್ರಿಸಬಹುದು ಎಂದು ಹೇಳಿದರು.
ಎಚ್.ಐ.ವಿ ರೋಗಿಗಳಿಗೆ ಕೋವಿಡ್-19 ಪಾಸಿಟಿವ್ ಬಂದಿದ್ದು, ಅವರಿಗೆ ಅಗತ್ಯವಿರುವ ಔಷಧಿಗಳನ್ನು ಮನೆಗಳಿಗೆ ಕಳಿಸಿಕೋಡುವ ವ್ಯವಸ್ಥೆ ಮಾಡಲಾಗಿದೆ ಎಂದು ಅಶೋಕ ದುಡಗುಂಟಿ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಮುನ್ಯಾಳ, ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗಿಯ ಸಂಯೋಜಕರಾದ ಮಹಾಂತೇಶ ಉಳ್ಳಾಗಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.////

 

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');