ಮೊಟ್ಟೆ ಡೀಲ್ ಪ್ರಕರಣ : ಸಚಿವೆ ಜೊಲ್ಲೆ ರಾಜೀನಾಮೆಗೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ

0
🌐 Belgaum News :

ಬೆಂಗಳೂರು : ಮಾತೃಪೂರ್ಣ ಯೋಜನೆಯಡಿ ಮೊಟ್ಟೆ ವಿತರಿಸುವ ಟೆಂಡರ್ ಹಂಚಿಕೆಯಲ್ಲಿ ಕಿಕ್ ಬ್ಯಾಕ್ ಪಡೆಯಲು ಮುಂದಾಗಿದ್ದ ಮಹಿಳಾ ಮತ್ತು ಮಕ್ಕಳ ಸಚಿವೆ ಶಶಿಕಲಾ ಜೊಲ್ಲೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಇಂದು ಮಹಿಳಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಮೌರ್ಯ ಸರ್ಕಲ್ ನ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪಕ್ಷದ ಮಹಿಳಾ ಪಡೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ,  ಕೂಡಲೇ ಸಚಿವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಗೆ ನೀಡಬೇಕೆಂದು ಆಗ್ರಹಿಸಿದರು. ಇತ್ತ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ನೇತೃತ್ವದಲ್ಲಿ ಬೆಂಗಳೂರಿನ ಕಾಂಗ್ರೆಸ್ ಭವನದ ಆವರಣದಲ್ಲಿಯೂ ಪ್ರತಿಭಟನೆ ನಡೆಸಿದರು.

ಇದೇ ವೇಳೆ ಪುಷ್ಪ ಅಮರನಾಥ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಸಚಿವರೇ ಅಕ್ರಮದಲ್ಲಿ ಭಾಗಿಯಾಗಿ ಬಡ ಮಕ್ಕಳ ಹೊಟ್ಟೆಗೆ ಕನ್ನ ಹಾಕಿದ್ದಾರೆ. ಮಹಿಳೆಯಾಗಿರುವ ಸಚಿವರಿಗೆ ತಾಯಿ ಹೃದಯವೇ ಇಲ್ಲ. ಇನ್ನೆಷ್ಟು ಮಕ್ಕಳ ಜೀವವನ್ನು ನೀವು ತೆಗೆಯಬೇಕು ಅಂತಾ ಇದ್ದೀರಿ..? ಎಂದು ಪ್ರಶ್ನಿಸಿದರು.

ಕೊರೊನಾ ಮೂರನೇ ಅಲೆ ಆತಂಕದಲ್ಲಿ ಇದ್ದರೂ ಮಕ್ಕಳಿಗೆ ನೀಡಬೇಕಾದ ಮೊಟ್ಟೆಗೆ ಕನ್ನ ಹಾಕಿದ ಸಚಿವರನ್ನು ಮನೆಗೆ ಕಳುಹಿಸಿ ತನಿಖೆ ನಡೆಸಿ. ಮಕ್ಕಳಾ ಆಯೋಗ ಸಚಿವರ ಮೇಲೆ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');