ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು : ಸತೀಶ ಜಾರಕಿಹೊಳಿ ಒತ್ತಾಯಿಸಿದರು.

0
🌐 Belgaum News :

ನಿಪ್ಪಾಣಿ: ಸರ್ಕಾರ ರಾಜ್ಯದಲ್ಲಿ ತಕ್ಷಣವೇ ಪ್ರವಾಹ ಸಮೀಕ್ಷೆ ಕೈಗೊಂಡು, ಸಂತ್ರಸ್ತರಿಗೆ ಹಂತಹಂತವಾಗಿ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದರು.

ನಿಪ್ಪಾಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದರು.

 

ಕೇಂದ್ರದ ಮೇಲೆ ಭರವಸೆ ಇಲ್ಲ:

ಸತತ ಮೂರು ವರ್ಷಗಳಿಂದ ರಾಜ್ಯದಲ್ಲಿ ಪ್ರವಾಹ ಉಂಟಾಗುತ್ತಿದ್ದರೂ ಕೂಡ ಕೇಂದ್ರ ಸರ್ಕಾರದಿಂದ ಸಮರ್ಪಕ ನೆರವು ದೊರೆತಿಲ್ಲ.  ಹೀಗಾಗಿ, ಕೇಂದ್ರ ಸರ್ಕಾರದ ಮೇಲೆ ಯಾವುದೇ ಭರವಸೆ ಇಲ್ಲ. ರಾಜ್ಯ ಸರ್ಕಾರವೇ ತನ್ನ ಖಜಾನೆಯಿಂದ ಸೂಕ್ತ ನೆರವು ನೀಡಬೇಕು ಎಂದು ಹೇಳಿದರು.

ಕಳೆದ ಬಾರಿ ಮನೆ ಕಳೆದುಕೊಂಡ ಅನೇಕರಿಗೆ ಈಗಲೂ ಪರಿಹಾರ ದೊರೆತಿಲ್ಲ. ಕೆಲವರಿಗೆ ಅರ್ಧ ಪರಿಹಾರ ಮಾತ್ರ ದೊರೆತಿದೆ. ಸತತ ಮೂರು ವರ್ಷಗಳಿಂದ ಪ್ರವಾಹ ಉಂಟಾಗುತ್ತಿರುವುದರಿಂದ ಈ ಭಾಗದ ಜನರ ಸ್ಥಿತಿ ಗಂಭೀರವಾಗಿದೆ. ಸರ್ಕಾರ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು, ಶೀಘ್ರ ಸಂತ್ರಸ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಸತೀಶ ಆಗ್ರಹಿಸಿದರು.

 

ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ; ಸಂತ್ರಸ್ತರಿಗೆ ಸಾಂತ್ವನ:

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಇಂದು ನಿಪ್ಪಾಣಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿತು.

ವೇದಗಂಗಾ ನದಿಯಿಂದ ಪ್ರವಾಹ ಪೀಡಿತವಾಗಿರುವ ತಾಲೂಕಿನ ಕೊಡನಿ, ಯಮಗರ್ಣಿ, ಜತ್ರಾಟ ಗ್ರಾಮಗಳ ಜನರಿಗೆ ಹಾಗೂ ಪರಿಹಾರ ಕೇಂದ್ರಗಳಲ್ಲಿನ ಸಂತ್ರಸ್ತರಿಗೆ ಕಾಂಗ್ರೆಸ್ ಮುಖಂಡರು ಸಾಂತ್ವನ ಹೇಳಿದರು.

ವೇದಗಂಗಾ ನದಿಯಿಂದ ಸಂಪೂರ್ಣ ಮುಳುಗಡೆಯಾಗಿರುವ ಯಮಗರ್ಣಿ ಬಳಿಯ ರಾಷ್ಟ್ರೀಯ ಹೆದ್ದಾರಿ-4 ರಲ್ಲಿರುವ ಸೇತುವೆಯನ್ನು ಸತೀಶ ಜಾರಕಿಹೊಳಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದರು.

ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ  ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಮುಖಂಡರಾದ ಎ.ಬಿ. ಪಾಟೀಲ, ಕಾಕಾಸಾಹೇಬ ಪಾಟೀಲ, ರಾಜೇಂದ್ರ ಪಾಟೀಲ್, ಕಿರಣ ರಜಪೂತ, ಹುಕ್ಕೇರಿ ತಹಶೀಲ್ದಾರ್ ಡಿ.ಎಚ್. ಹೂಗಾರ, ಉಮೇಶ ಸಿದ್ನಾಳ, ತಾಲೂಕಾ ವೈದ್ಯಾಧಿಕಾರಿ ಡಾ. ಉದಯ ಕುಡಚಿ, ಸಂಕೇಶ್ವರ ಪುರಸಭೆ ಅಧಿಕಾರಿ ಜಗದೀಶ ಇಟಿ, ಯಮಕಮರಡಿ ಪಿಎಸ್‍ಐ ಬಿ.ಬಿ. ನ್ಯಾಮಗೌಡ,  ಮಹಾಂತೇಶ ಮಗದುಮ, ಇಲಿಯಾಸ ಇನಾಮದಾರ, ಪಪ್ಪುಗೌಡ ಪಾಟೀಲ, ಈರಣ್ಣಾ ಬಿಸಿರೊಟ್ಟಿ, ಗಣಪತಿ ಕೊಗನೊಳ್ಳಿ ಸೇರಿ ಇನ್ನಿತರರು ಇದ್ದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');