ಸರಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ಹಿರೇಮಠ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಪರ ಕಾರ್ಯ ಮಾಡಲಿ ಎಂದು ಆಶೀರ್ವದಿಸಿದ್ದಾರೆ.

0
🌐 Belgaum News :

ಬೆಳಗಾವಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ಹಿರೇಮಠ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಪರ ಕಾರ್ಯ ಮಾಡಲಿ ಎಂದು ಆಶೀರ್ವದಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ರಚನೆಯಾಗಿ ಎರಡು ವರ್ಷ ಪೂರ್ಣಗೊಳ್ಳುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಉತ್ತರ ಕರ್ನಾಟಕದಲ್ಲಿ ಎಂದೂ ಕಂಡರಿಯದ ಭೀಕರ ಪ್ರವಾಹ ಬಂದ ಸಂದರ್ಭದಲ್ಲಿ ಸಮರ್ಥವಾಗಿ ನಿಭಾಯಿಸುವ ಮೂಲಕ ಯಶಸ್ವಿಯಾಗಿದ್ದಾರೆ. ಅಲ್ಲದೆ, ದೇಶದಲ್ಲಿ ಕಣ್ಣಿಗೆ ಕಾಣಿಸದ ವೈರಸ್ ಹಾವಳಿಯಿಂದ ರಾಜ್ಯವನ್ನು ಸುರಕ್ಷಿತವಾಗಿ ಇಡಲು ಯಡಿಯೂರಪ್ಪನವರು ತೆಗೆದುಕೊಂಡ ನಿರ್ಣಯ ಶ್ಲಾಘನೀಯವಾದದ್ದು ಎಂದು ಶ್ರೀಗಳು ಸ್ಮರಿಸಿದರು.

ರಾಜ್ಯದಲ್ಲಿ ಆರ್ಥಿಕ ಸಂಕಷ್ಟದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಅನುದಾನ ನೀಡಿ ಸಾರ್ಥಕತೆ ಮೆರೆದಿದ್ದಾರೆ. ಪ್ರಸಕ್ತ ವರ್ಷದಲ್ಲಿ ಬೆಳಗಾವಿಯ ಏಳು ತಾಲೂಕುಗಳು ಪ್ರವಾಹಕ್ಕೆ ತುತ್ತಾಗಿವೆ. ಸ್ವತಃ ಮುಖ್ಯಮಂತ್ರಿಗಳೇ ಆಗಮಿಸಿ ಇಲ್ಲಿನ ಜನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿರುವುದು ಅಭಿಮಾನದ ಸಂಗತಿ. ಬರುವ ದಿನಗಳಲ್ಲಿಯೂ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಿ ಎಂದು ಶ್ರೀಗಳು ಹಾರೈಸಿದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');