ವರಿಷ್ಠರ ತೀರ್ಮಾನಕ್ಕೆ ಬದ್ಧ : ಸಿಎಂ ಬಿ.ಎಸ್.ಯಡಿಯೂರಪ್ಪ

0
🌐 Belgaum News :

ಬೆಳಗಾವಿ : ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ  ಪ್ರವಾಹ ವೀಕ್ಷಣೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ. ನಾವೇಲ್ಲರೂ ಒಗ್ಗಟ್ಟಾಗಿದ್ದೇವೆ, ಒಂದಾಗಿದ್ದೇವೆ. ಸಿದ್ದರಾಮಯ್ಯರಂತ ನೂರು ಜನರು ಬಂದರು ಏನು ಆಗಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದೇನೆ.  ನಾಳೆ ಬೆಳಗ್ಗೆ ಬೆಂಗಳೂರಿನಲ್ಲಿ 2 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಮಧ್ಯಾಹ್ನ ಕಾರವಾರ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಅಲ್ಲಿಗೆ ಹೋಗಿ ಪರಿಶೀಲನೆ ಮಾಡುತ್ತೇನೆ ಎಂದರು.

ನಾನು ಸಂತೃಪ್ತನಾಗಿದ್ದೇನೆ. ರಾಜ್ಯದಲ್ಲಿ ಯಾರಿಗೂ ಸಿಗದ ಅವಕಾಶ, ಸ್ಥಾನ ಮಾನ ನನಗೆ ಸಿಕ್ಕಿದೆ. ನಾವೆಲ್ಲರೂ ಹೈಕಮಾಂಡ್ ಮಾತನ್ನು ಕೇಳಬೇಕಾಗುತ್ತದೆ. 2023ರ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದು ತಿಳಿಸಿದರು.

ಬೆಳಗ್ಗೆ ಸಂಜೆಯೊಳಗೆ ಸಿಎಂ ಬದಲಾವಣೆ ಸಂಬಂಧ ಹೈಕಮಾಂಡ್ ಸಂದೇಶ ಬರಲಿದೆ ಎಂದು ಹೇಳಿದ ಮುಖ್ಯಮಂತ್ರಿ ನಾಳೆ ಉತ್ತರ ಕನ್ನಡ ಜಿಲ್ಲೆ ಪ್ರವಾಸ ಘೋಷಿಸುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');